spot_img
Saturday, March 28, 2026
spot_img

ವಂಡ್ಸೆಯಲ್ಲಿ ಸಿ.ಎಸ್.ಸಿ ಕೇಂದ್ರ ಶುಭಾರಂಭ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್‌ನ ನೂತನ ಕಾರ್ಯಕ್ರಮವಾದ ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ)ವನ್ನು ವಂಡ್ಸೆಯಲ್ಲಿ ಇತ್ತೀಚೆಗೆ ಉದ್ಘಾಟಿಸಲಾಯಿತು.

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕ ಗಣೇಶ್ ಬಿ. ಮತ್ತು ವಂಡ್ಸೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿಯವರು ಜಂಟಿಯಾಗಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಸಿ.ಎಸ್.ಸಿ ಕೇಂದ್ರಗಳ ಮೂಲಕ ಸುಮಾರು 700ಕ್ಕೂ ಹೆಚ್ಚು ಸೇವೆಗಳನ್ನು ಪಡೆಯಬಹುದಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸೇವೆಗಳನ್ನು ಜನಸಾಮಾನ್ಯರಿಗೆ ಹತ್ತಿರದಲ್ಲಿಯೇ ಲಭ್ಯವಾಗಲಿದೆ. ಸರಕಾರ ನಿಗಧಿಪಡಿಸಿದ ಶುಲ್ಕದಲ್ಲಿ ಜನರಿಗೆ ಸೇವೆ ನೀಡಲಾಗುವುದು ಎಂದರು.

ಉದಯ ಕುಮಾರ್ ಶೆಟ್ಟಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಈ ಸೇವಾ ಕಾರ್ಯಕ್ರಮ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ವಂಡ್ಸೆ ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ.ಶಿವರಾಮ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ.ಶ್ರೀಧರ ಶೆಟ್ಟಿ, ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಪ್ರಸನ್ನ ಕುಮಾರ್, ವಂಡ್ಸೆ ಒಕ್ಕೂಟದ ಅಧ್ಯಕ್ಷ ಗಿರೀಶ್ ನಾಯ್ಕ್, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!