spot_img
Wednesday, January 22, 2025
spot_img

ಕುಂದಾಪುರ: ಮೂರನೇ ದಿನಕ್ಕೆ ಕಾಲಿಟ್ಟ ಹಿಜಾಬ್ ವಿವಾದ

ಸ್ಕಾರ್ಫ್ ಧರಿಸಿ ಗೇಟ್ ಒಳಪ್ರವೇಶಿಸಿದ ವಿದ್ಯಾರ್ಥಿನಿಯರು: ಕೇಸರಿ ಶಾಲು ಧರಿಸಿ ಓಡಾಡಿದ ವಿದ್ಯಾರ್ಥಿಗಳು

ಕುಂದಾಪುರ: ಹಿಜಾಬ್-ಕೇಸರಿ ಶಾಲು ಸಂಘರ್ಷ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರವೂ ಕೂಡಾ ಕುಂದಾಪುರದ ಜ್ಯೂನಿಯರ್ ಕಾಲೇಜು ವಠಾರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಗುರುವಾರ ಹಿಜಾಬ್ ಧರಿಸಿ ಕಾಲೇಜು ಆವರಣದೊಳಗೆ ಪ್ರವೇಶ ಮಾಡದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಶುಕ್ರವಾರ ಪ್ರಾಂಶುಪಾಲರು ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸುವಂತಿಲ್ಲ ಎಂದು ಸೂಚಿಸಿದರೂ ಕೂಡಾ ಗೇಟ್ ವಿದ್ಯಾರ್ಥಿನಿಯರು ಗೇಟ್ ಒಳಕ್ಕೆ ಪ್ರವೇಶಿಸಿ ಕಾಲೇಜು ಆವರಣದಲ್ಲಿ ಇರಲು ಅವಕಾಶ ನೀಡುವಂತೆ ಆಗ್ರಹಿಸಿದ ಘಟನೆ ನಡೆಯಿತು.

ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಕಾಲೇಜು ಆವರಣ ಪ್ರವೇಶಿಸುತ್ತಿದ್ದಂತೆ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಓಡಾಡಲು ಆರಂಭಿಸಿದರು. ಅವರನ್ನೂ ಹೊರಕ್ಕೆ ಕಳುಹಿಸುವಂತೆ ಪೋಷಕರು ಆಕ್ಷೇಪಿಸಿದಾಗ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳನ್ನು ಹೊರಕಳುಹಿಸಲಾಯಿತು.

ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಜೈ ಶ್ರೀರಾಮ ಘೋಷಣೆ ಕೂಗುತ್ತಾ ಹೊರಬರುತ್ತಿದ್ದಂತೆ ಗೇಟಿನ ಬಳಿ ಮಾತಿನ ಚಕಮಕಿ ಆರಂಭವಾಯಿತು. ಹಿಂದೂ ಸಂಘಟನೆ ಹಾಗೂ ಮುಸ್ಲಿಂ ಸಂಘಟನೆಯ ಮುಖಂಡರು ತಮ್ಮ ನಿಲುವುಗಳ ಸಮರ್ಥನೆಗೆ ಮುಂದಾದರು.

ಈ ನಡುವೆ ಹೊರಬಂದ ವಿದ್ಯಾರ್ಥಿಗಳು ಕೇಸರಿ ಶಾಲು ತೆಗೆದು ಮತ್ತೆ ತರಗತಿ ಒಳಗೆ ಪ್ರವೇಶಿಸಿದರು. ಆದರೆ ವಿದ್ಯಾರ್ಥಿನಿಯರು ಮಾತ್ರ ಸ್ಕಾರ್ಫ್ ತೆಗೆಯಲು ಒಪ್ಪದೇ ಮತ್ತೆ ಗೇಟಿನ ಬಳಿಯೇ ನಿಂತುಬಿಟ್ಟರು.
ಕುಂದಾಪುರದಲ್ಲಿ ಮೂರು ದಿನಗಳಿಂದ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಹಿಜಾಬ್ ಮತ್ತು ಕೇಸರಿ ಸಂಘರ್ಷ ನಿಲ್ಲುವ ಸೂಚನೆ ಕಂಡು ಬರುತ್ತಿಲ್ಲ. ಎರಡು ಸಮುದಾಯಗಳು ಮಧ್ಯೆ ಪ್ರವೇಶ ಮಾಡಿದ್ದು ಪ್ರತಿಷ್ಠೆಯ ವಿಚಾರವಾಗಿ ತಗೆದುಕೊಂಡಿದ್ದು ರಾಜಕೀಯವಾಗಿ ಕೆಸರೆರೆಚಾಟ ಆರಂಭವಾಗಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!