spot_img
Saturday, March 28, 2026
spot_img

ಕೃಷಿ, ಮತ್ತು ಋಷಿ ಪರಂಪರೆ ಈ ದೇಶದ ಎರಡು ಕಣ್ಣುಗಳಿದ್ದಂತೆ -ಕೆ.ವಿ ರಮೇಶ್ ರಾವ್ ಪಾಂಡೇಶ್ವರ

ಕೋಟ: ಈ ದೇಶದ ಪ್ರಮುಖ ಆಸ್ತಿ ಕೃಷಿ ಮತ್ತು ಋಷಿ ಪರಂಪರೆ ಅದನ್ನು ಎಂದು ಮರೆಯಬಾರದು ಎಂದು ಪಾಂಡೇಶ್ವರ ರಕ್ತೇಶ್ವರಿ ದೇವಸ್ಥಾನ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಹೇಳಿದರು.

ಪಂಚವರ್ಣ ಯುವಕ ಮಂಡಲ ಕೋಟ ಇದರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ ,ಗಿಳಿಯಾರು ಯುವಕ ಮಂಡಲ,ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು ಇವರುಗಳ ಸಹಯೋಗದಲ್ಲಿ 13 ನೇ ಆವೃತಿಯ ತಿಂಗಳ ಸರಣಿ ಕಾರ್ಯಕ್ರಮ ಸಾಧಕ ಕೃಷಿಕನ ಗೌರವಿಸುವ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿಕ ಕಾರ್ಯನಿರ್ವಹಿಸಿದರೆ ಮಾತ್ರ ನಮ್ಮ ಜೀವನ ನಡೆಯಲು ಸಾಧ್ಯವಿದೆ ಇಲ್ಲವಾದಲ್ಲಿ ಆಧುನಿಕ ಜಗತ್ತು ಪ್ಲಾಸ್ಟಿಕ್ ಅನ್ನ ಬಳಕೆ ಮಾಡುವ ಸ್ಥಿತಿ ಸೃಷ್ಠಿಯಾಗಬಹುದು.ಆದರೆ ಅಂತಹ ರೈತನ ಗೋಳು ಇಂದಿನ ಸರಕಾರ ಕೇಳದ ಸ್ಥಿತಿ ನಿರ್ಮಾಗೊಳಿಸಿದೆ. ಹೀಗಾದರೆ ಕೃಷಿ ಉಳಿಯಲು ಸಾಧ್ಯವಿದೆಯೇ ಎಂದು ಪ್ರಶ್ನಿಸಿದ ಅವರು, ರೈತ ಸಮುದಾಯ ಯಾವುದೇ ಬೆಳೆ ಬೆಳೆದರೂ ಅದಕ್ಕೆ ಸಮರ್ಪದ ದರ ಆಯಾ ಸಂದರ್ಭದಲ್ಲಿ ಸಿಗದಿರುವುದು ಶೋಚನೀಯ, ಈ ಎಲ್ಲಾ ಸಮಸ್ಯೆಗಳಿಗೆ ಆಡಳಿತ ನಡೆಸುವ ಸರಕಾರಗಳೇ ನೇರ ಹೊಣೆಗಾರರಾಗಿದ್ದಾರೆ ಎಂದು ಹೇಳಿದ ಅವರು, ಒಂದು ಸರಕಾರ ಮಾಡಬೇಕಾದ ಕಾರ್ಯ ಇಂತಹ ಸಂಘಸಂಸ್ಥೆಗಳು ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಧ್ಯಯನಶೀಲ ಹಿರಿಯ ಕೃಷಿಕ ಭಾಸ್ಕರ್ ಶೆಟ್ಟಿ ಮಣೂರು ಮಾತನಾಡಿ ರೈತರು ಕಷ್ಟಪಟ್ಟು ಬೆಳೆದ ಬೆಳೆ ಯಾರ ಪಾಲಾಗುತ್ತಿದೆ ಕೇಳಿದರೆ ಅದು ಖಾಸಗಿ ಮೀಲ್ ದಾರರಿಗೆ ವರವಾಗಿ ಪರಿಣಮಿಸಿದೆ.ತಾನು ಬೆಳೆದ ಬೆಳೆಗೆ ಸೂಕ್ತ ದರ ಸರಕಾರ ಘೋಷಿಸಬೇಕು ಆದರೆ ಸರಕಾರ ನಿರ್ಲಕ್ಷ್ಯ ತೋರಿದ ಪರಿಣಾಮ ಈ ಪರಿಸ್ಥಿತಿ ಸಿಲುವ ಸ್ಥಿತಿ ನಿರ್ಮಾಣಗೊಂಡಿದೆ ಎಂದರು.

ಈ ಸಂದರ್ಭದಲ್ಲಿ ತೆಕ್ಕಟ್ಟೆಯ ಕೊಮೆ ವಿಶೇಷಚೇತನ ಸಾಧಕ ಕೃಷಿಕ ನಾಗರಾಜ್ ಮೊಗವೀರ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಮೃತ್ ಜೋಗಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎ.ಪಿ.ಎಮ್.ಸಿ ಉಡುಪಿ ಉಪಾಧ್ಯಕ್ಷ ಕೃಷ್ಣ ಪೂಜಾರಿ ಪಿ, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಶ್ರೀಕಾಂತ್ ಶೆಣೈ,ಗಿಳಿಯಾರು ಯುವಕ ಮಂಡಲದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೇರ್ಳೆ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ವಿಪ್ರ ಮಹಿಳಾ ಬಳಗದ ಸಂಚಾಲಕಿ ವನೀತಾ ಉಪಾಧ್ಯ,ಸ್ಮೀತಾ ,ಪಂಚವರ್ಣ ಯುವಕ ಮಂಡಲ ಇದರ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,ಸದಸ್ಯ ಭಾಸ್ಕರ ದೇವಾಡಿಗ,ನಾಗರಾಜ ಪೂಜಾರಿ,ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಪುಷ್ಭಾ ಕೆ ಹಂದಟ್ಟು, ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿಪ್ರ ಮಹಿಳಾ ಬಳಗದ ಸುಜಾತ ಮಹೇಶ್ ಬಾಯರಿ ನಿರೂಪಿಸಿದರು ಪಂಚವರ್ಣ ಯುವಕ ಮಂಡಲದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿ ವಂದಿಸಿದರು. ಸಂಚಾಲಕ ಅಜಿತ್ ಆಚಾರ್ಯ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!