spot_img
Saturday, March 28, 2026
spot_img

ಅಂತರಂಗದ ಭಕ್ತಿ ಭಗವಂತನಿಗೆ ಸ್ವೀಕೃತ-ಡಾ.ಡಿ.ವೀರೇಂದ್ರ ಹೆಗ್ಗಡೆ

ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ
ಕುಂದಾಪುರ: ಮನುಷ್ಯ ಧರ್ಮದಿಂದ ಹೊರತಾಗಿ ಬದುಕಲು ಸಾಧ್ಯವಿಲ್ಲ. ಸಂಸ್ಕೃತಿ, ಆಚಾರ ವಿಚಾರಗಳು, ಧರ್ಮದ ಮಾರ್ಗದರ್ಶನ ವ್ಯಕ್ತಿತ್ವಕ್ಕೆ ಭೂಷಣ. ಆಧುನಿಕತೆಯ ಬಾಹ್ಯ ವೇಷಭೂಷಣಗಳು ಬದಲಾದರೂ ಮನುಷ್ಯತ್ವ ಬದಲಾಗಬಾರದು. ಅಂತರಂಗದ ನಿಷ್ಕಲ್ಮಷವಾದ ಭಕ್ತಿ ಭಗವಂತನಿಗೆ ಸ್ವೀಕಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಕೋಟೇಶ್ವರದ ಮಹಾತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ನಡೆದ ಧ್ವಜಸ್ತಂಭ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ನೆಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಸಂದೇಶ ನೀಡಿದರು.

ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಆಶಿರ್ವಚನ ನೀಡಿದರು.
ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ, ಕೋಟೇಶ್ವರ ಗ್ರಾಮ ಪಂಚಾಯತಿ ಅಧ್ಯಕ್ಷ ಕೃಷ್ಣ ಗೊಲ್ಲ, ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಳದ ಪ್ರಧಾನ ತಂತ್ರಿಗಳಾದ ಪ್ರಸನ್ನಕುಮಾರ ಐತಾಳ್, ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಾನಂದ ಚಾತ್ರ, ಕುಂಭಾಶಿ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮುಖ್ಯಸ್ಥರಾದ ದೇವರಾಯ ಶೇರೆಗಾರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಪ್ರಭಾಕರ ಶೆಟ್ಟಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಗಣೇಶ್ ಗೌಡ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಸದಸ್ಯ ಎನ್.ರಾಘವೇಂದ್ರ ರಾವ್ ಸ್ವಾಗತಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಗೋಪಾಡಿ ಶ್ರೀನಿವಾಸ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಆರು ದಶಕಗಳ ಬಳಿಕ ನೆಡೆಯುವ ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಕಳೆದ ಒಂದು ವಾರದಿಂದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡಿವೆ. ಈ ಯಶಸ್ವಿಗೆ ಶ್ರಮಿಸಿದ ಎಲ್ಲರಿಗೂ ಹೃದಯ ತುಂಬಿದ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ನಟಿ, ನಿರೂಪಕಿ ಅಪರ್ಣಾ ಎನ್ ಹಾಗೂ ಪತ್ರಕರ್ತ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸುರೇಶ್ ಬೆಟ್ಟಿನ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!