spot_img
Saturday, March 28, 2026
spot_img

ಹಿಂ.ವ. ಅಭಿವೃದ್ಧಿ ನಿಗಮ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ಉಡುಪಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಗೆ ಒಳಪಡುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತುಪಡಿಸಿ) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 1 ರಿಂದ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ನೀರಾವರಿ ಸೌಲಭ್ಯ ಹೊಂದಿರದ, ವಾರ್ಷಿಕ ಆದಾಯ 40,000 ರೂ. ಒಳಗಿರುವ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.kanataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!