spot_img
Saturday, March 28, 2026
spot_img

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ನೂತನ ಪದಾಧಿಕಾರಿಗಳ ಪದಪ್ರದಾನ

ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ, ಗೌರವ ಅರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ಫೆ.21 ಸೋಮವಾರ ಹೆಮ್ಮಾಡಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ನಡೆಯಿತು.

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ ಹಾಗೂ ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಶಿವರಾಮ್ ಕೆ.ಎಮ್. ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಶಿವರಾಮ್ ಕೆ.ಎಮ್. ಅವರು, ಸಮಾಜದಲ್ಲಿ ಒಗ್ಗಟ್ಟು, ಏಳ್ಗೆ, ವ್ಯಕ್ತಿತ್ವ ವಿಕಸನದ ದೃಷ್ಟಿಯಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ. ನಮ್ಮ ಮುಂದಿನ ತಲೆಮಾರಿಗೆ ಸಂಘಟನೆಯ ಜವಬ್ದಾರಿಗಳನ್ನು ಹಸ್ತಾಂತರಿಸುವ ಕೆಲಸ ನಾವಿಂದು ಮಾಡಬೇಕಾಗಿದೆ. ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕವಾಗಿ ಮೊಗವೀರ ಯುವ ಸಂಘಟನೆ ಎಲ್ಲರ ಗಮನ ಸಳೆದಿದ್ದು, ಈ ಹಿಂದೆ ಕರೋನಾ ಫ್ರಂಟ್‌ಲೈನ್ ವಾರಿಯರ್ಸ್‌ಗಳಾಗಿ ಸಂಘಟನೆಯ ಸದಸ್ಯರು ಮಾದರಿ ಕೆಲಸ ನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಡಾ.ಜಿ.ಶಂಕರ್ ಅಪೇಕ್ಷೆಯಂತೆ ಮಹಿಳಾ ಸಂಘಟನೆಯನ್ನು ಬಲಪಡಿಸುವ, ಪ್ರತೀ ಘಟಕದಲ್ಲಿ 100 ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವ ಕೆಲಸ ಆಗಬೇಕಾಗಿದೆ ಎಂದರು.

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ ಮಾತನಾಡಿ, ಮೊಗವೀರ ಯುವ ಸಂಘಟನೆ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಹೆಮ್ಮಾಡಿ ಘಟಕ ಅತ್ಯುತ್ತಮವಾಗಿ ತನ್ನ ಜವಬ್ದಾರಿಗಳನ್ನು ನಿಭಾಯಿಸಿಕೊಂಡು ಬಂದಿದೆ. ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ತನ್ನ ಇತಿಮಿತಿಯಲ್ಲಿ ಕಾರ್ಯನಿರ್ವಹಿಸಿದೆ. ಮುಂದಿನ ದಿನಗಳಲ್ಲಿ ಸಮುದಾಯದ ಯುವಕರನ್ನು ಒಗ್ಗೂಡಿಸಿಕೊಂಡು ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದ ಅವರು, ನಮ್ಮ ಕುಲಮಾತೆ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಈಗಾಗಲೇ ದೇವಳದ ಅರ್ಚಕರ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ದೇವಳಕ್ಕೆ ಸಂಬಂಧಪಟ್ಟ ದುರ್ಗಪ್ಪ ನಾಯಕನ ಕೋಟೆಯನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ ಎಂದರು.

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ಪ್ರಭಾಕರ ಎನ್.ಎಮ್ ಸೇನಾಪುರ ಅಧ್ಯಕ್ಷತೆ ವಹಿಸಿದ್ದರು.

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆ ಮಾಜಿ ಅಧ್ಯಕ್ಷರಾದ ಕೆ.ಕೆ ಕಾಂಚನ್ ಮಾತನಾಡಿ, ಸಮಾಜ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಬೇಕಿದೆ. ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವ ಜವಬ್ದಾರಿ ಪೋಷಕರ ಮೇಲಿದೆ. ಗುಣಮಟ್ಟದ ಶಿಕ್ಷಣ ನೀಡುವುದರಿಂದ ಮಾತ್ರ ಪರಿವರ್ತನೆ ಸಾಧ್ಯವಿದೆ. ಇವತ್ತು ಶಿಕ್ಷಣ ಉದ್ದೇಶ ಸಾಲ ಸೌಲಭ್ಯಗಳು ದೊರೆಯುತ್ತಿದೆ. ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಮಾಜಿ ಅಧ್ಯಕ್ಷರಾದ ಸತೀಶ್ ಎಂ.ನಾಯ್ಕ್, ಸದಾನಂದ ಬಳ್ಕೂರು, ನಿಯೋಜಿತ ಕಾರ್ಯದರ್ಶಿ ರವೀಶ ಕೊರವಡಿ, ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಗೌರವಾಧ್ಯಕ್ಷ ಉಮೇಶ ಬಡಾಕೆರೆ, ಕೊಲ್ಲೂರು ಮೂಕಾಂಬಿಕಾ ದೇವಳದ ಧರ್ಮದರ್ಶಿ ರತ್ನ ರಮೇಶ ಕುಂದರ್, ಬಗ್ವಾಡಿ ಹೋಬಳಿ ಸ್ತ್ರೀಶಕ್ತಿ ಅಧ್ಯಕ್ಷೆ ಸುಮಿತ್ರ ಆನಂದ ಮೊಗವೀರ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾಗಿ ಲೋಹಿತಾಶ್ವ ಆರ್.ಕುಂದರ್ ಬಾಳಿಕೆರೆ, ಕಾರ್ಯದರ್ಶಿಯಾಗಿ ಪ್ರವೀಣ ಗಂಗೊಳ್ಳಿ, ಕೋಶಾಧಿಕಾರಿಯಾಗಿ ದಿನೇಶ್ ಬಿ.ಕಾಂಚನ್ ಹಾಗೂ ಪದಾಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೆ.ಕೆ ಕಾಂಚನ್, ಉದಯ ಕುಮಾರ್ ಹಟ್ಟಿಯಂಗಡಿ, ಸುರೇಶ್ ವಿಠಲವಾಡಿ, ನಿರ್ಗಮನ ಅಧ್ಯಕ್ಷ ಪ್ರಭಾಕರ ಎನ್.ಸೇನಾಪುರ, ಲೋಹಿತಾಶ್ವ ಆರ್.ಕುಂದರ್, ಕೋಶಾಧಿಕಾರಿ ಚಂದ್ರ ಮರವಂತೆ, ಯುವ ಸಂಘಟನೆ ಜಿಲ್ಲಾಧ್ಯಕ್ಷ ಶಿವರಾಮ್ ಕೆ.ಎಮ್., ರವೀಶ ಕೊರವಡಿ, ಕರೋನಾ ಫ್ರಂಟ್‌ಲೈನ್ ವಾರಿಯರ್ಸ್‌ಗಳಾದ ರಾಘವೇಂದ್ರ ನೆಂಪು, ರಾಜು ಶ್ರೀಯಾನ್ ಗುಜ್ಜಾಡಿ, ಕೊಲ್ಲೂರು ದೇವಳದ ಧರ್ಮದರ್ಶಿ ರತ್ನಾ ರಮೇಶ ಕುಂದರ್, ಹಾಡಿಗರಡಿ ದೇವಳದ ಮುಖ್ಯಸ್ಥರಾದ ನಾಗೇಶ ಕಾಂಚನ್ ಇವರನ್ನು ಸನ್ಮಾನಿಸಲಾಯಿತು.

ಚಿನ್ಮಯಿ ಕಾಂಚನ್ ಬಟ್ಟೆಕುದ್ರು ಪ್ರಾರ್ಥಿಸಿ, ರಾಜು ಶ್ರೀಯಾನ್ ಗುಜ್ಜಾಡಿ ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಪ್ರವೀಣ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಬಳಿಕ ಎಸ್.ಪಿ ಮ್ಯೂಸಿಕ್ ಕುಂದಾಪುರ ಇವರಿಂದ ಸಂಗೀತ ರಸಮಂಜರಿ ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!