spot_img
Saturday, March 28, 2026
spot_img

ಕುಂದಾಪುರ ಸ.ಪ.ಪೂ ಕಾಲೇಜಿನಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಬಗ್ಗೆ ತರಬೇತಿ

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಐವತ್ತು ಸ್ವಯಂ ಸೇವಕರಿಗೆ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ಮಾಹಿತಿ ಮತ್ತು ತರಬೇತಿಯನ್ನು ನೀಡಲಾಯಿತು.

ಫೆಬ್ರವರಿ 27ರಂದು ನಡೆಯುವ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಯಶಸ್ಸುಗೊಳಿಸಲು ಐವತ್ತು ಸ್ವಯಂ ಸೇವಕರಿಗೆ ತರಬೇತಿ ನೀಡಲು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳ ಸಂಪನ್ಮೂಲ ವ್ಯಕ್ತಿಯಾಗಿ ಭಾಗ್ಯಲಕ್ಷ್ಮಿ ಆಗಮಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಭುಜಂಗ ಶೆಟ್ಟಿಯವರು ಪೋಲಿಯೊ ನಿರ್ಮೂಲನೆಯ ಕಾರ್ಯದಲ್ಲಿ ನಮ್ಮ ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಷಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಮಾಲತಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಸಂಧ್ಯಾ ನಾಯಕ ಆಯೋಜಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!