spot_img
Saturday, March 28, 2026
spot_img

ಪಾರ್ವತಿ ಜಿ.ಐತಾಳ್, ಅರೆಹೊಳೆ ಸದಾಶಿವ ರಾವ್ ಸಹಿತ ಐವರು ರಂಗಕರ್ಮಿಗಳಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಪ್ರದಾನ ಮಾಡುತ್ತಿರುವ ಮಲಬಾರ್ ವಿಶ್ವರಂಗ ಪುರಸ್ಕಾರ 2022ಕ್ಕೆ ರಾಜ್ಯ ಮತ್ತು ಹೊರ ರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.

ರಂಗಕರ್ಮಿಗಳಾದ ಡಾ. ಪಾರ್ವತಿ ಜಿ. ಐತಾಳ್, ಮಂಗಳೂರಿನ ಅರೆಹೊಳೆ ಸದಾಶಿವ ರಾವ್, ಡಾ. ಭರತ್ ಕುಮಾರ್ ಪೊಲಿಪು, ಬಿ. ಪ್ರಭಾಕರ್ ಭಂಡಾರಿ, ಹಾಗೂ ಹಾವೇರಿಯ ಶಂಕರ ಶಿವಪ್ಪ ತುಮ್ಮಣ್ಣನವರ್ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಾ. 27ರಂದು ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕ ರಾಜೇಶ್ ಭಟ್ ಪಣಿಯಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!