spot_img
Saturday, March 28, 2026
spot_img

ಸಿದ್ಧಾಪುರ ಏತ ನೀರಾವರಿ ಯೋಜನೆ ಮಂಜೂರಾತಿಗೆ ಸಂಸದರಿಂದ ಸಿ.ಎಂಗೆ ಮನವಿ

ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ, ಅಜ್ರಿ, ಕೊಡ್ಲಾಡಿ, ಹೊಸಂಗಡಿ, ಕರ್ಕುಂಜೆ ಪ್ರದೇಶಗಳಿಗೆ 1200 ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಒದಗಿಸಲು ಸಿದ್ದಾಪುರ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡುವಂತೆ ಶಿವಮೊಗ್ಗ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು.

ಅವರು ಫೆ. 26 ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡಿದರು.

ಬೈಂದೂರು ತಾಲ್ಲೂಕಿಗೆ 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಮಂಜೂರಾತಿ ನೀಡುವಂತೆಯೂ ಮನವಿ ಮಾಡಿದ ಸಂಸದರು, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಹಾಗೂ ನಬಾರ್ಡ ಸಹಯೋಗದ ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಸರಬರಾಜು ಮಾಡುವ ರೂ.400 ಕೋಟಿಗಳ ಪ್ರಸ್ತಾವನೆಗೆ ಸಚಿವ ಸಂಪುಟದ ಅನುಮೋದನೆ ನೀಡುವಂತೆ ವಿನಂತಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!