Sunday, September 8, 2024

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ಅದ್ದೂರಿಯ ಹುಟ್ಟೂರ ಸನ್ಮಾನ

ಕುಂದಾಪುರ: ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ನೇತೃತ್ವದಲ್ಲಿ ವಕ್ವಾಡಿ ಫಾರ್ಚೂನ್ ವಿಲೇಜ್ ಹೊಟೇಲ್ ಬಳಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನಗೊಂಡಿತು.

ಶ್ರೀ ಸುಬ್ರಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಆಶೀರ್ವಚನ ನೀಡಿ, ವ್ಯಕ್ತಿ ನಡೆಸುವ ಸಾಮಾಜಿಕ, ಆದ್ಯಾತ್ಮಿಕತೆಯೊಂದಿಗಿನ ಬದುಕು ಶ್ರೇಷ್ಠವಾದುದು. ಅಸಾಧಾರಣ ಸಾಧನೆ ಮಾಡಿದವರಿಗೆ ಸನ್ಮಾನ ನೀಡಲೇಬೇಕಾಗಿರುವುದು ಅಗತ್ಯ. ಸಾವಿರಾರು ಮಂದಿ ಬದುಕನ್ನು ಏಳಿಗೆಯತ್ತ ಕೊಂಡೊಯ್ದ ಪ್ರವೀಣ ಶೆಟ್ಟಿಯವರು ಸಾಮಾಜಿಕ ಸೇವಾಕ್ಷೇತ್ರದ ನಡೆ ಮಾದರಿಯಾಗಿದೆ ಎಂದರು.

ಪ್ರವೀಣ್ ಶೆಟ್ಟಿಯವರು ಪ್ರಸಾದ್ ನೇತ್ರಾಲಯಕ್ಕೆ ಕೊಡುಗೆಯಾಗಿ ನೀಡಿದ ಅಂಬುಲೆನ್ಸ್ ವಾಹನದ ಕಿಲಿಕೈ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹಸ್ತಾಂತರಿಸಿ ಶುಭ ಹಾರೈಸಿದರು.
ಸ್ಮರಣ ಸಂಚಿಕೆಯನ್ನು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬಿಡುಗಡೆಗೊಳಿಸಿದರು. ವಕ್ವಾಡಿ ಪ್ರವೀಣ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜು ಪ್ರಾಂಶುಪಾಲ ಎಂ. ಬಾಲಕೃಷ್ಣ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಶಾಸಕ ಯು.ಟಿ. ಖಾದರ್, ಉಡುಪಿ ಶಾಸಕ ಕೆ. ರಘುಪತಿ ಭಟ್, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಹಿರಿಯ ಸಂಪಾದಕ ವಿಶ್ವೇಶ್ವರ ಭಟ್, ಉದ್ಯಮಿ ಕೆ. ನಾಗರಾಜ್, ಯು‌ಎ‌ಇ ಕನ್ನಡಿಗಾಸ್ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ. ಶ್ರೀನಿವಾಸ್, ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್, ಹುಟ್ಟೂರ ಸನ್ಮಾನ ಸಮಿತಿಯ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್, ಜಿ.ಪಿ. ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ನಟ-ನಿರ್ದೇಶಕ ರಿಷಬ್ ಶೆಟ್ಟಿ, ನಟಿ ಹರಿಪ್ರಿಯಾ, ವಕ್ವಾಡಿ ಪ್ರವೀಣ್ ಶೆಟ್ಟಿಯವರ ಪತ್ನಿ ರೂಪಾಲಿ ಪ್ರವೀಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ೧೭ ಮಂದಿ ಅಶಕ್ತರಿಗೆ ವೈದ್ಯಕೀಯ ನೆರವಿನ ಸಹಾಯಧನ ವಿತರಿಸಲಾಯಿತು. ವಕ್ವಾಡಿ ಶಾಲೆಯ ೨೫ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.

ವಕ್ವಾಡಿ ಪ್ರವೀಣ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಕಾರ್ಯದರ್ಶಿ ವೇಣುಗೋಪಾಲ ಹೆಗ್ಡೆ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ದಿನಕರ್ ಆರ್. ಶೆಟ್ಟಿ ಪ್ರಸ್ತಾವಿಸಿದರು. ಪತ್ರಕರ್ತ ಕೆ.ಸಿ ರಾಜೇಶ್, ಮಹೇಶ್ ವಕ್ವಾಡಿ ನಿರೂಪಿಸಿದರು. ಬಳಿಕ ಆಳ್ವಾಸ್ ಪ್ರತಿಷ್ಠಾನ ಮೂಡಬಿದರೆ ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!