spot_img
Monday, March 23, 2026
spot_img

ಲಿಂಗಾನುಪಾತ ತೀರ ವ್ಯತ್ಯಾಸ ಸಾಮಾಜಿಕ ಅಸಮತೋಲನ ಮತ್ತು ಕ್ಷೋಭೆಗೆ ದಾರಿ-ಎಸ್.ಜನಾರ್ದನ್

  ಬೈಂದೂರು :ಸಮುದಾಯದ ಲಿಂಗಾನುಪಾತ ತೀರ ವ್ಯತ್ಯಾಸ ಆಗುವುದರಿಂದ ಸಾಮಾಜಿಕ ಅಸಮತೋಲನ ಮತ್ತು ಕ್ಷೋಭೆಗೆ ಕಾರಣವಾಗಬಹುದು. ಅಂತಹ ವ್ಯತ್ಯಾಸಕ್ಕೆ ಪ್ರಸವಪೂರ್ವ ಲಿಂಗ ಪರೀಕ್ಷೆ ಮತ್ತು ಭ್ರೂಣಹತ್ಯೆ  ಕಾರಣವಾಗಿರುತ್ತದೆ. ಇದರ ವಿರುದ್ಧ ಜನ ಜಾಗೃತಿ ಮೂಡಿಸುವ ಮತ್ತು ಕ್ರಮ ತೆಗೆದುಕೊಳ್ಳುವ ಹೊಣೆ ಆರೋಗ್ಯ ಇಲಾಖೆಗೆ ಸೇರಿದೆ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಹೇಳಿದರು.         ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಬೈಂದೂರು ಜೇ‌ಸಿಐ ಸಂಯುಕ್ತ ಆಶ್ರಯದಲ್ಲಿ ಮರವಂತೆ ಸಾಧನಾ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಪ್ರಸವಪೂರ್ವ ಲಿಂಗ ಪರೀಕ್ಷೆ ಲಿಂಗ ಪರೀಕ್ಷೆ ಮತ್ತು ಭ್ರೂಣಹತ್ಯೆ ನಿಷೇಧ ಕಾನೂನು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.                     

ಮಾಹಿತಿ ನೀಡಿದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ ರಾಮರಾವ್ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿದ ಉಡುಪಿ ಜಿಲ್ಲೆಯಲ್ಲಿ 1000 ಪುರುಷರಿಗೆ 954 ಸ್ತ್ರೀಯರು ಇದ್ದಾರೆ ಎನ್ನುವುದು ಆತಂಕದ ಸಂಗತಿ. ಆರೋಗ್ಯ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿ ಹೆಣ್ಣು ಶಿಶು ಮರಣ ಸಂಭವಿಸಿದಾಗ ಅದರ ನೈಜ ಕಾರಣ ತಿಳಿದುಕೊಳ್ಳಬೇಕು. ಲಿಂಗಾನುಪಾತ ಅಂತರದ ಅಪಾಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ವಕೀಲೆ ಚಂದ್ರಿಕಾ ಈ ಕುರಿತಾದ ಕಾನೂನಿನ ಮಾಹಿತಿ ನೀಡಿದರು.   

 ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆ ವಹಿಸಿದ್ದರು ತಾಲೂಕು ಆರೋಗ್ಯಾಧಿಕಾರಿ ಬಾ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮೀ ಸ್ವಾಗತಿಸಿ, ನಿರೂಪಿಸಿದರು. ಬೈಂದೂರು ಜೇಸಿಐ ಉಪಾಧ್ಯಕ್ಷೆ ಗುಲಾಬಿ ಪೂಜಾರಿ ಇದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!