spot_img
Saturday, March 28, 2026
spot_img

ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ

ಕುಂದಾಪುರ, ಮಾ.8: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಹಿಳಾ ದಿನಾಚರಣೆಯ ಕುರಿತು ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಅಡುಗೆ ಸಿಬ್ಬಂದಿ ಗೀತ ಜಿ ನಾಯ್ಕ, ಅಡುಗೆ ಸಹಾಯಕರಾದ ಪಾರ್ವತಿ, ಮಂಜುಳಾ, ಜ್ಯೋತಿ ಮತ್ತು ಶಾಲಾ ಆಯಾ ಜೈಬುನ್ನೀಸ ಅವರನ್ನು ಗೌರವಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಂಜುನಾಥ ಎ ಜಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮಹಮ್ಮದ್ ಫಾರೂಕ್, ಸದಸ್ಯ ದಿನೇಶ್ ಭಂಡಾರಿ, ಶೇಖರ್, ನಯನ, ರಾಧಾ ಉಪಸ್ಥಿತರಿದ್ದರು.
ವಂಡ್ಸೆ ಕ್ಲಸ್ಟರ್‌ನ ಸಿ.ಆರ್.ಪಿ ನಾಗರಾಜ ಶೆಟ್ಟಿ ಯವರು ಮಹಿಳಾ ದಿನಾಚರಣೆ ವಿಶೇಷತೆ ಮತ್ತು ಹಮ್ಮಿಕೊಂಡಿರುವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಶಿಕ್ಷಕ ಚಂದ್ರ ನಾಯ್ಕ್ ಎಚ್ ಸ್ವಾಗತಿಸಿದರು. ಶಿಕ್ಷಕಿ ಆಶಾ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಂದಿಸಿದರು. ಶಿಕ್ಷಕವೃಂದದವರು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಸಂಯೋಜಿಸಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!