spot_img
Saturday, March 28, 2026
spot_img

ಮುಂಬರುವ ಕರ್ನಾಟಕ ಚುನಾವಣೆಗೆ ಈ ಫಲಿತಾಂಶವೇ ದಿಕ್ಸೂಚಿ-ಬಿ. ವೈ. ರಾಘವೇಂದ್ರ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಬಲಿಷ್ಠಗೊಳಿಸುವ, ಅಭಿವೃದ್ಧಿಪರ ಮತ್ತು ಜನಪರ ಕಾರ್ಯಕ್ರಮಗಳ ಪರಿಣಾಮ ದೇಶದಲ್ಲಿ ಇತ್ತೀಚೆಗೆ ನಡೆದಂತಹ ಪಂಚರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಉತ್ತರಪ್ರದೇಶ ಮತ್ತು ಮಣಿಪುರಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಹಾಗೂ ಉತ್ತರಖಂಡ್ ಮತ್ತು ಹಾಗೂ ಗೋವಾದಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವುದೇ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ದೇಶದ ಎಲ್ಲ ಮೂಲೆಗಳಲ್ಲಿ ಭಾರತೀಯ ಜನತಾ ಪಕ್ಷ ತನ್ನ ಛಾಪನ್ನು ಮೂಡಿಸಿದ್ದು ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಂಜಾಬ್‌ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೇಸ್ ಅಲ್ಲಿಯೂ ಸಹ ತನ್ನ ಅಸ್ತಿತ್ವಕಳೆದುಕೊಂಡಿದ್ದು, ಕಾಂಗ್ರೆಸ್ ಪಕ್ಷವು ದಿನೇ ದಿನೇ ದೇಶದಲ್ಲಿ ಸಂಪೂರ್ಣವಾಗಿ ಅವನತಿಯಾಗಲಿದೆ ಎಂಬುದನ್ನು ಈ ಚುನಾವಣೆಗಳಿಂದ ಸಾಭೀತಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಹಗಲು ಕನಸು ಕಾಣುತ್ತಿರುವುದು ಕನಸ್ಸಾಗಿಯೇ ಉಳಿಯಲಿದೆ. ಕಾಂಗ್ರೆಸ್ ಪಕ್ಷದವರು ಕರ್ನಾಟಕ ರಾಜ್ಯದಲ್ಲಿ ಹಲವು ಸಲ ಕೀಳು ಮಟ್ಟದ ರಾಜಕೀಯ ಮಾಡಿದ್ದನ್ನು ಇಡೀ ಜನತೆಯು ಗಮನಿಸುತ್ತಲೇ ಬಂದಿದ್ದು, ಮುಂಬರುವ ರಾಜ್ಯದ ಚುನಾವಣೆಯಲ್ಲಿ ಮತ್ತೊಮ್ಮೆ ಬಿ.ಜೆ.ಪಿ. ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ಭರವಸೆ ನನಗಿದೆ ಎಂದು ಅವರು ಸಂತಷ ಹಂಚಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!