spot_img
Saturday, March 28, 2026
spot_img

ವಂಡ್ಸೆ ಬೃಂದಾವನ ಸಂಜೀವಿನಿ ಒಕ್ಕೂಟ: ಮಹಿಳಾ ದಿನಾಚರಣೆ

ಕುಂದಾಪುರ: ಬೃಂದಾವನ ಸಂಜೀವಿನಿ ಒಕ್ಕೂಟ ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮಹಾತ್ಮಗಾಂಧಿ ಸಭಾಭವನದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ವಂಡ್ಸೆ ಪಂಚಾಯಿತಿ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೂಪ ಗೋಪಿ, ಒಕ್ಕೂಟದ ಅಧ್ಯಕ್ಷೆ ಆಶಾ ಟಿ., ಸ್ತ್ರೀಶಕ್ತಿ ಅಧ್ಯಕ್ಷೆ ಜುಲೇಖಾ, ಗ್ರಾ.ಪಂ. ಸದಸ್ಯ ಗೋವರ್ಧನ ಜೋಗಿ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ, ಜಯಂತಿ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಎಂ.ಬಿ.ಕೆ ಮತ್ತು ಎಲ್.ಸಿ.ಆರ್.ಪಿ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕೃಷಿಕರು, ಪ್ರಸೂತಿ ತಜ್ಞೆ ಸಿಂಗಾರಿ ಶೆಟ್ಟಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪಾರ್ವತಿ ಪಟಗಾರ್, ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಶೆಟ್ಟಿ, ಗೃಹೋದ್ಯಮಿ ಸವಿತಾ ಕಾಮತ್ ಅವರನ್ನು ಸನ್ಮಾನಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಂಗೀತಾ ಸ್ವಾಗತಿಸಿದರು, ಆಶಾರಾಣಿ ಕಾರ್ಯಕ್ರಮ ನಿರ್ವಹಿಸಿ ಸಲ್ಮಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!