spot_img
Saturday, March 28, 2026
spot_img

ಗ್ರಾಮ ಗ್ರಾಮಗಳಲ್ಲಿ ಭಜನಾ ತಂಡಗಳ ರಚನೆ-ಭಜನಾ ಪರಂಪರೆಗೆ ಪುನಶ್ಚೇತನ: ವಸಂತ ಸಾಲ್ಯಾನ್

ತ್ರಾಸಿಯಲ್ಲಿ ಸಾಧನಾ ಸಮಾವೇಶ, ಸಾಮೂಹಿಕ ಸತ್ಯನಾರಾಯಣ ಪೂಜೆ, ಭಜನಾ ತಂಡಗಳ ಉದ್ಘಾಟನೆ

ಕುಂದಾಪುರ: ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಮೂಡಿಸುವಲ್ಲಿ ಭಜನೆ ವಿಶೇಷ ಮಹತ್ವ ಪಡೆದುಕೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಜನಾ ಕಮ್ಮಟಗಳ ಮೂಲಕ ಜನರಿಗೆ ಭಜನಾ ತರಬೇತಿ ನೀಡಲಾಗುತ್ತಿದೆ. ಗ್ರಾಮ ಗ್ರಾಮಗಳಲ್ಲಿ ಭಜನಾ ತಂಡಗಳನ್ನು ರಚಿಸಲಾಗುತ್ತಿದ್ದು, ಮನೆ ಮನೆಗಳಲ್ಲಿ ಭಜನೆ ಮಾಡುವ ಪರಂಪರೆಯನ್ನು ಮುಂದುವರಿಸುವ ಪ್ರಯತ್ನ ಸಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಪ್ರಾಮಾಣಿಕತೆ, ಶಿಸ್ತು ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದ್ದು, ಜನರಲ್ಲಿ ಆಧ್ಯಾತ್ಮಿಕ ಚಿಂತನೆ, ಭಾವನೆಗಳನ್ನು ಬೆಳೆಸುವ ಕಾರ್ಯ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ತ್ರಾಸಿ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ತ್ರಾಸಿ ವಲಯ ಇವರ ಜಂಟಿ ಆಶ್ರಯದಲ್ಲಿ ತ್ರಾಸಿ ಕಮ್ಮಾರಕೊಡ್ಲು ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ನಡೆದ ಸಾಧನಾ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ನೂತನ ಭಜನಾ ಮಂಡಳಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಎಚ್.ರಮೇಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ, ಯೋಜನೆಯ ಹಿರಿಯ ನಿರ್ದೇಶಕ ಗಣೇಶ ಬಿ., ಸಮಿತಿ ಗೌರವಾಧ್ಯಕ್ಷ ಉಮೇಶ ಎಲ್.ಮೇಸ್ತ, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ, ಸ್ವಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ರಘುರಾಮ ಕೆ.ಪೂಜಾರಿ ಶುಭಾಂಶನೆಗೈದರು. ತ್ರಾಸಿ ವಲಯದ 11 ಮಂದಿ ಸೇವಾ ಪ್ರತಿನಿಧಿಗಳನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತ್ರಾಸಿ ಗ್ರಾಪಂ ಅಧ್ಯಕ್ಷೆ ಗೀತಾ ದೇವಾಡಿಗ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಕೃಷ್ಣ ಪೂಜಾರಿ, ಸ್ವಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷ ನಾಗರಾಜ ಖಾರ್ವಿ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಲಯ ಮೇಲ್ವಿಚಾರಕ ಗಿರೀಶ್ ವರದಿ ವಾಚಿಸಿದರು. ರಾಘವೇಂದ್ರ ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!