Sunday, September 8, 2024

ಉಡುಪಿ ಡಾ.ಟಿ.ಎಂ.ಎ ಪೈ ಆಸ್ಪತ್ರೆ: ಮಹಿಳಾ ದಿನಾಚರಣೆ ಮತ್ತು ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

  ಉಡುಪಿ, ಮಾ 14 : ಉಡುಪಿಯ ಡಾ.ಟಿ.ಎಂ.ಎ.ಪೈ ಆಸ್ಪತ್ರೆ ವತಿಯಿಂದ ಮಾರ್ಚ್ 12ರ ಶನಿವಾರದಂದು ಆಸ್ಪತ್ರೆಯ ದಿನಾಚರಣೆ ಮತ್ತು ಮಹಿಳಾ ದಿನಾಚರಣೆಯನ್ನು ಟೌನ್ ಹಾಲ್ ನಲ್ಲಿ ಆಚರಿಸಲಾಯಿತು.

  ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೆಬ್‌ಸೈಟ್ ಅನ್ನು ಬಿಡುಗಡೆ ಮಾಡಲಾಯಿತು. ಉದ್ಯಮಿ ಹಾಗೂ ದಾನಿಯಾದ ಇಂದಿರಾ ಬಲ್ಲಾಳ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಜೀವನದ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ಅವರನ್ನು ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಆಸ್ಪತ್ರೆಯ ವತಿಯಿಂದ ಸನ್ಮಾನಿಸಲಾಯಿತು.

  ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಪ್ರೊ ಚಾನ್ಸೆಲರ್ ಡಾ.ಎಚ್.ಎಸ್.ಬಲ್ಲಾಳ್ ಅವರು ಮಾತನಾಡಿ, ಭಾರತೀಯ ಸಶಸ್ತ್ರ ಪಡೆಗಳು ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಈ ರಾಷ್ಟ್ರದ ಅಭಿವೃದ್ಧಿಗಾಗಿ ಅತ್ಯಮೂಲ್ಯ ಕೊಡುಗೆ ನೀಡುತ್ತಿರುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸಲು ಮಹಿಳಾ ದಿನಾಚರಣೆ ನಮಗೆಲ್ಲರಿಗೂ ಒಂದು ಅವಕಾಶವಾಗಿದೆ ಎಂದರು. ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಡಾ ಟಿಎಂಎ ಪೈ ಆಸ್ಪತ್ರೆಯ ಕೊಡುಗೆಯನ್ನು ಶ್ಲಾಘಿಸಿದ ಅವರು, ಸಂಕಷ್ಟದ ಸಮಯದಲ್ಲಿ ನಿಸ್ವಾರ್ಥ ಕೆಲಸ ಮಾಡಿದ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.

ಗೌರವ ಅತಿಥಿಗಳಾಗಿ ಕೆಎಂಸಿ ಮಣಿಪಾಲದ ಡೀನ್ ಡಾ ಶರತ್ ಕುಮಾರ್ ರಾವ್, ಹಾಗೂ ಎಂಎಂಎಂಸಿ ಮಣಿಪಾಲದ ಡೀನ್ ಡಾ ಉಲ್ಲಾಸ್ ಕಾಮತ್ ಭಾಗವಹಿಸಿದ್ದರು.  ಡಾ ಶರತ್ ರಾವ್ ಅವರು ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಕೆಎಂಸಿ ಮಣಿಪಾಲಕ್ಕೆ ಸೇರುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಶೇಕಡಾ 60 ಕ್ಕೂ ಹೆಚ್ಚಿನವರು ಮಹಿಳೆಯರು ಎಂದು ಹೆಮ್ಮೆಯಿಂದ ಉಲ್ಲೇಖಿಸಿದರು.  ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅವಿಸ್ಮರಣೀಯ ಪಾತ್ರಕ್ಕಾಗಿ ಡಾ ಟಿಎಂಎ ಪೈ ಆಸ್ಪತ್ರೆ ಉಡುಪಿಯ ಎಲ್ಲಾ ಸಿಬ್ಬಂದಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದರು.  ಡಾ.ಉಲ್ಲಾಸ್ ಕಾಮತ್ ಅವರು ಆಸ್ಪತ್ರೆಯ ಬಗ್ಗೆ ತಮ್ಮ ಹೆಮ್ಮೆಯನ್ನು ತಿಳಿಸಿ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಎಲ್ಲಾ ಮಹಿಳೆಯರಿಗೆ ತಮ್ಮ ಶುಭಾಶಯಗಳನ್ನು ಸಹಾ ಕೋರಿದರು.ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ಸ್ವಾಗತಿಸಿ ಮಾತನಾಡಿದರು.

  ಎಲ್ಲಾ ಕಷ್ಟಗಳ ನಡುವೆಯೂ ಕೋವಿಡ್ ಉಲ್ಬಣಗಳ ಸಮಯದಲ್ಲಿ ತಮ್ಮ ಪೂರ್ಣ ಹೃದಯದ ಕೊಡುಗೆಗಾಗಿ ಅವರು ಎಲ್ಲಾ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.  ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ವಿಶೇಷ ಗೌರವವಾಗಿ ಮಹಿಳಾ ದಿನಾಚರಣೆಯೊಂದಿಗೇ ಆಸ್ಪತ್ರೆಯ ದಿನವನ್ನು ಆಚರಿಸಲು ಕಾರಣವನ್ನು ಅವರು ವಿವರಿಸಿದರು – ಆಸ್ಪತ್ರೆಯ 72% ರಷ್ಟು ಉದ್ಯೋಗಿಗಲು ಮಹಿಳೆಯರೇ – ಹಾಗೂ ಅವರೆಲ್ಲರೂ ತಮ್ಮ ಕುಟುಂಬಗಳಿಗೆ ವೈಯಕ್ತಿಕ ಬದ್ಧತೆಯ ಹೊರತಾಗಿಯೂ ಆಸ್ಪತ್ರೆಯ ಸೇವೆಗಳಿಗೆ ತಮ್ಮ ಅತ್ಯುತ್ತಮ ಪಾತ್ರವನ್ನು ನೀಡಿದ್ದಾರೆ ಎಂದು ಶ್ಲಾಘಿಸಿದರು.

ಆಸ್ಪತ್ರೆಯ ವೆಬ್‌ಸೈಟ್ – https://drtmapaihospital.com  – ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆಗಳು ಮತ್ತು   ಸೌಲಭ್ಯ ಗಳ ಕುರಿತು ಸಾರ್ವಜನಿಕರಿಗೆ ಪ್ರಮುಖ ಮಾಹಿತಿಯನ್ನು ಒದಗಿಸುತ್ತದೆ. ಆಸ್ಪತ್ರೆಯ ಮಹಿಳಾ ಸಿಬ್ಬಂದಿಗಳಿಂದ ನೃತ್ಯಗಳು, ಹಾಡುಗಳು ಮತ್ತು ಕಿರುನಾಟಕಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ಶಕ್ತಿಯುತ ಸಾಂಸ್ಕೃತಿಕ ಪ್ರದರ್ಶನಗಳು ದಿನದ ಮುಖ್ಯ ಆಕರ್ಷಣೆಯಾಗಿದ್ದವು. ಕಾರ್ಯಕ್ರಮದಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಡಾ.ಪದ್ಮರಾಜ್ ಹೆಗ್ಡೆ, ಡಾ.ಕೀರ್ತಿನಾಥ ಬಲ್ಲಾಳ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಡಾ. ಅರ್ಚನಾ ಭಕ್ತ ಕಾರ್ಯಕ್ರಮವನ್ನು ನಿರೂಪಿಸಿದರು. ಉಪ ವೈದ್ಯಕೀಯ ಅಧೀಕ್ಷಕ ಡಾ. ರಾಜಾರಾಮ್ ಪೈ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!