spot_img
Friday, March 27, 2026
spot_img

ಕೆ.ಪಿ.ಎಸ್. ಬಿದ್ಕಲ್‌ಕಟ್ಟೆ: ವಾರ್ಷಿಕ ಕ್ರೀಡಾಕೂಟ ಮತ್ತು ಪ್ರತಿಭಾ ಪುರಸ್ಕಾರ

ಕುಂದಾಪುರ: ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಶಾಲಾ ಹಳೆವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ, ಹಾಗೂ ವಿವಿಧ ದಾನಿಗಳ ಸಹಕಾರದೊಂದಿಗೆ ಶಾಲಾ ವಾರ್ಷಿಕ ಕ್ರೀಡಾಕೂಟ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಎಸ್.ಡಿ.ಎಂಸಿ ಅಧ್ಯಕ್ಷರಾದ ಗೌತಮ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಮೊಳಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಶೇಖರ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯದ ವರ್ಧನೆಯ ಜೊತೆಗೆ ಭೌದ್ಧಿಕ ಸಾಮರ್ಥ್ಯದ ವರ್ಧನೆಗೂ ಸಹಕಾರಿಯಾಗುತ್ತದೆ. ಮಕ್ಕಳು ಶಾಲಾ ಕಲಿಕೆಯಲ್ಲಿ ಸಕ್ರಿಯರಾಗಿರಲು ಕ್ರೀಡಾ ಚಟುವಟಿಕೆಗಳು ಶಾಲೆಗಳಲ್ಲಿ ನಿರಂತರವಾಗಿ ನಡೆಯುವುದು ಅವಶ್ಯಕವಾಗಿದೆ. ಕೋವಿಡ್-೧೯ ಕರಿನೆರಳಿನಿಂದ ಹೊರಬಂದು ಮತ್ತೆ ಶಾಲೆಗಳಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಗರಿಗೆದರುತ್ತಿರುವುದು ಆಶಾದಾಯಕ ವಿಚಾರ. ಎನ್ನುತ್ತಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮೊಳಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಮನೋಜ್ ಕುಮಾರ್ ಶೆಟ್ಟಿಯವರು ಕ್ರೀಡಾಧ್ವಜವನ್ನು ಅರಳಿಸುವ ಮೂಲಕ ಕ್ರೀಡಾಚಟುವಟಿಕೆಗಳಿಗೆ ಚಾಲನೆ ನೀಡಿ, ಎಲ್ಲಾ ವಿದ್ಯಾರ್ಥಿಗಳು ಸೋಲು ಗೆಲುವಿನ ಬಗ್ಗೆ ಯೋಚಿಸದೇ ಕ್ರೀಡಾಸ್ಪೂರ್ತಿಯಿಂದ ಆಡಿ. ಗೆದ್ದರೆ ಸಂತೋಷ, ಸೋತರೆ ಅನುಭವ. ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೊಳಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಶಾಂತ್, ಮೊಳಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಮನೋಜ್ ಕುಮಾರ್ ಶೆಟ್ಟಿ, ಹಾರ್ದಳ್ಳಿ-ಮಂಡಳ್ಳಿ ಗ್ರಾ.ಪಂ. ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ, ಸದಸ್ಯರಾದ ಸೂರ್ಯನಾರಾಯಣ ಉಡುಪ, ಇಂಜಿನಿಯರ್ ಸುಭಾಶ್ಚಂದ್ರ ಶೆಟ್ಟಿ, ಮೊಳಹಳ್ಳಿ ಶಿವಶಾಂತಿ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ದಿನಪಾಲ ಶೆಟ್ಟಿ, ನಾಗರಿಕ ಹಿತರಕ್ಷಣಾ ವೇದಿಕೆಯ ಉಪಾಧ್ಯಕ್ಷರಾದ ಶಶಿಧರ ಶೆಟ್ಟಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗೌತಮ ಶೆಟ್ಟಿ, ಸ್ಥಳೀಯ ಉದ್ಯಮಿಗಳಾದ ಶಂಕರ ಹೆಗ್ಡೆ, ರಾಮ ಕುಲಾಲ್, ಮುಖ್ಯೋಪಾಧ್ಯಾಯರಾದ ಉದಯ್‌ಕುಮಾರ್ ಶೆಟ್ಟಿ, ಸಹಶಿಕ್ಷಕರುಗಳಾದ ರಾಜೀವ ಕುಲಾಲ್, ಸತೀಶ್ ಶೆಟ್ಟಿಗಾರ್, ಶಂಕರ ದೇವಾಡಿಗ, ಚಿತ್ರಾಕುಮಾರಿ, ಶ್ಯಾಮಲ, ರಶ್ಮಿ, ಸುಕನ್ಯ, ಅತಿಥಿ ಶಿಕ್ಷಕಿಯರಾದ ಭಾರತಿ, ನಾಗರತ್ನ, ಜ್ಞಾನದೀಪ ಶಿಕ್ಷಕಿ, ಮಹಾಲಕ್ಷ್ಮೀ, ಅವಕಾಶ ಫೌಂಡೇಶನ್ ಶಿಕ್ಷಕಿ ಪವಿತ್ರ, ಗೌರವ ಶಿಕ್ಷಕಿ ಶೋಭಿತಾ, ಕಂಪ್ಯೂಟರ್ ಶಿಕ್ಷಕಿ ಅಕ್ಷತಾ, ಪೂರ್ವ ಪ್ರಾಥಮಿಕ ಶಿಕ್ಷಕಿಯರಾದ ಸೌಮ್ಯ, ದೀಪಿಕಾ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಉದಯ್‌ಕುಮಾರ್ ಶೆಟ್ಟಿ ಸ್ವಾಗತಿಸಿ, ಸಹಶಿಕ್ಷಕ ಸತೀಶ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!