spot_img
Friday, March 27, 2026
spot_img

ಗಂಗೊಳ್ಳಿ : ಬಾಲ್ಯವಿವಾಹ ನಿಷೇಧ ಅಭಿಯಾನ ಅರಿವು ಕಾರ್ಯಕ್ರಮ ಮತ್ತು ಸಹಿ ಸಂಗ್ರಹ ಅಭಿಯಾನ

ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಬಾಲ್ಯವಿವಾಹ ನಿಷೇಧ ಭಾಗೀದಾರ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯವಿವಾಹ ನಿಷೇಧ ಅಭಿಯಾನ ಅರಿವು ಕಾರ್ಯಕ್ರಮ ಮತ್ತು ಸಹಿ ಸಂಗ್ರಹ ಅಭಿಯಾನ ಗಂಗೊಳ್ಳಿ ಗ್ರಾಮ ಪಂಚಾಯತ್ ಸಮೀಪ ಮಂಗಳವಾರ ನಡೆಯಿತು.

ಬಾಲ್ಯವಿವಾಹ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ರಾಜ್ಯವನ್ನು ಬಾಲ್ಯವಿವಾಹ ಮುಕ್ತ ರಾಜ್ಯವನ್ನಾಗಿಸುವ ದಿಸೆಯಲ್ಲಿ ’ವಿಡಿಯೋ ಆನ್ ವೀಲ್ಸ್’ ಮುಖಾಂತರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಕ್ಕಳಾ ರಕ್ಷಣಾ ಘಟಕದ ರಕ್ಷಣಾ ಅಧಿಕಾರಿ ಮಹೇಶ್ ದೇವಾಡಿಗ ಹೇಳಿದರು.

ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯರಾದ ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ರಾಘವೇಂದ್ರ ಪೈ, ಗಂಗೊಳ್ಳಿ ವಲಯದ ಅಂಗನವಾಡಿ ಮೇಲ್ವಿಚಾರಕಿ ರಾಜೇಶ್ವರಿ, ಉಡುಪಿ ಮಹಿಳಾ ಶಕ್ತಿ ಕೇಂದ್ರದ ಅಧಿಕಾರಿ ದೀಪಾ, ಗಂಗೊಳ್ಳಿ ಪೊಲೀಸ್ ಠಾಣೆಯ ಎಚ್‌ಸಿ ರಾಮ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ ಖಾರ್ವಿ, ಪೋಷಣ್ ಅಭಿಯಾನ ಸಂಯೋಜಕ ಮಂಜುನಾಥ, ಗ್ರಾಪಂ ದ್ವಿತೀಯ ದರ್ಜೆ ಸಹಾಯಕ ಶೇಖರ್ ಜಿ., ಗ್ರಾಪಂ ಸಿಬ್ಬಂದಿ ಉದಯಕುಮಾರ್, ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

ಗಂಗೊಳ್ಳಿ ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!