spot_img
Friday, March 27, 2026
spot_img

ಮಾ.19ಕ್ಕೆ ವಕ್ವಾಡಿಯಲ್ಲಿ ಯುವ ಸಂಭ್ರಮ-2022

ಕುಂದಾಪುರ: ಯುವಶಕ್ತಿ ಮಿತ್ರ ಮಂಡಲ ಹೆಗ್ಗಾರ್‌ಬೈಲು, ವಕ್ವಾಡಿ ಇವರ ಬೆಳ್ಳಿ ಹಬ್ಬದ ಪ್ರಯುಕ್ತ ಯುವ ಸಂಭ್ರಮ-2022 ಮಾ.19ರಂದು ಶನಿವಾರ ವಕ್ವಾಡಿಯ ಯುವಶಕ್ತಿ ವೇದಿಕೆ, ಪಂಚಾಯತ್ ವಠಾರ ಇಲ್ಲಿ ನಡೆಯಲಿದೆ.

ಸಂಜೆ 6 ಗಂಟೆಗೆ ಯುವಶಕ್ತಿ ಸಿನಿಮಾ ನೃತ್ಯ ಸ್ಪರ್ಧೆ- ಹೆಜ್ಜೆ ಸಪ್ಪಳ-2022, 6.45ಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ತಂಡ ತಾಂಡವ ಡ್ಯಾನ್ಸ್ ಸ್ಟುಡಿಯೋ ಕುಂದಾಪುರ ಇವರಿಂದ ಡ್ಯಾನ್ಸ್ ಧಮಾಕ, ರಾತ್ರಿ 8ಗಂಟೆಗೆ ಪುಷ್ಪನಮನ ಮತ್ತು ಯುವ ಸ್ಪೂರ್ತಿ ಪುರಸ್ಕಾರ ಪ್ರದಾನ ಸಮಾರಂಭ ನಡೆಯಲಿದೆ. ಲೇಖಕ ಸತೀಶ್ ಶೆಟ್ಟಿ ವಕ್ವಾಡಿ ಅವರಿಗೆ ಯುವಸ್ಪೂರ್ತಿ ಪುರಸ್ಕಾರ ಪ್ರದಾನ ಮಾಡಲಾಗುವುದು. ದಿ.ರವೀಂದ್ರ ಕುಲಾಲ್ ವಕ್ವಾಡಿ ಅವರಿಗೆ ಪುಷ್ಪನಮನ ಸಲ್ಲಿಕೆ ನಡೆಯಲಿದೆ.

ಸಭಾ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಗ್ರಾ.ಪಂ. ಅಧ್ಯಕ್ಷೆ ಆಶಾಲತಾ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭೂ ಅಭಿವೃದ್ದಿ ಬ್ಯಾಂಕ್ ಕುಂದಾಪುರ ಇದರ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷ ಕಿಶೋರ್ ಕುಮಾರ್, ಜನಪ್ರತಿನಿಧಿ ಪತ್ರಿಕೆಯ ಸಂಪಾದಕ ಸುಬ್ರಹ್ಮಣ್ಯ ಪಡುಕೋಣೆ, ಉಡುಪಿ ಪ್ರಸಾದ್ ನೇತ್ರಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ಮೋಹನದಾಸ, ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಅಧ್ಯಕ್ಷ ಚಂದ್ರಶೇಖರ ಬೀಜಾಡಿ ಭಾಗವಹಿಸಲಿದ್ದಾರೆ.

ರಾತ್ರಿ 9 ಗಂಟೆಗೆ ಓಂಕಾರ್ ಕಲಾವಿದರು ಕನ್ನುಕೆರೆ ತೆಕ್ಕಟ್ಟೆ ಇವರಿಂದ ಕಣ್ಣಾ ಮುಚ್ಚಾಲೆ ನಗೆ ನಾಟಕ ನಡೆಯಲಿದೆ ಎಂದು ಅಧ್ಯಕ್ಷರಾದ ಸುಧೀಂದ್ರ ವಕ್ವಾಡಿ, ಕಾರ್ಯದರ್ಶಿ ಶಂಕರ್ ಕುಲಾಲ್ ವಕ್ವಾಡಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!