spot_img
Thursday, March 26, 2026
spot_img

ಕಲಾವಿದ ಕುಂಭಾಶಿ ರಾಮಚಂದ್ರ (ಬೆನಕ) ಆಚಾರ್ಯ ನಿಧನ


ಕುಂದಾಪುರ : ಕೋಟೇಶ್ವರದ ಪ್ರಸಿದ್ಧ ಚೇತನಾ ಕಲಾರಂಗದ ಸಕ್ರಿಯ ಸದಸ್ಯ, ಅಪ್ರತಿಮ ನಾಟಕ ಕಲಾವಿದ ರಾಮಚಂದ್ರ (ಬೆನಕ) ಆಚಾರ್ಯ (60ವ) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು.

ಕುಂಭಾಶಿಯ ನಾರಾಯಣ ಆಚಾರ್ಯ-ಸತ್ಯಮ್ಮ ದಂಪತಿಯ ಪುತ್ರನಾದ ರಾಮಚಂದ್ರ ಆಚಾರ್ಯ ಸೆಂಟ್ರಿಂಗ್ ಮತ್ತು ಮರಗೆಲಸಗಳನ್ನು ಮಾಡುತ್ತಿದ್ದರು. ಕೋಟೇಶ್ವರದ ಚೇತನಾ ಕಲಾರಂಗದ ಸದಸ್ಯನಾಗಿ, ಸಂಸ್ಥೆಯ ಹಲವು ನಾಟಕಗಳಲ್ಲಿ ಪಾತ್ರ ನಿರ್ವಹಿಸಿ ಜನಪ್ರಿಯರಾಗಿದ್ದರು. ಪ್ರಸಿದ್ಧ ನಿರ್ದೇಶಕರಾದ ಪ್ರಭಾಕರ ಐತಾಳ, ವಾದಿರಾಜ ತೌಳ, ವಾಸುದೇವ ಶೆಟ್ಟಿಗಾರ್, ಗಣೇಶ್ ಐತಾಳರ ನಿರ್ದೇಶನದ ಕುರಿದೊಡ್ಡಿ ಕುರುಕ್ಷೇತ್ರ, ಚೋರ ಚರಣದಾಸ, ಬಾವಿ ಕಳೆದಿದೆ, ಬೆನಕನ ಕೆರೆ ಮೊದಲಾದ ನಾಟಕಗಳಲ್ಲಿ ಮನೋಜ್ಞ ಅಭಿನಯ ನೀಡಿದ್ದರು. ಬೆನಕನ ಕೆರೆ ನಾಟಕದ ಬೆನಕನ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದಂತೆ ಅದ್ಭುತ ನಟನೆಯ ನಂತರ, ಆ ಪಾತ್ರದ ಬೆನಕ’ ಎಂಬ ಹೆಸರು ಇವರಿಗೇ ಅಂಟಿಕೊಂಡು ಬೆನಕ ಆಚಾರ್ಯ ಎಂದೇ ಅಭಿಮಾನಿಗಳು ಪ್ರೀತಿಯಿಂದ ಕರೆಯತೊಡಗಿದರು. ಚಿತ್ರ ನಿರ್ದೇಶಕ ಕೋಟೇಶ್ವರ ಶ್ರೀಧರ ಉಡುಪರು ನಿರ್ಮಿಸಿ ನಿರ್ದೇಶಿಸಿದ್ದ ಕುಂದಗನ್ನಡದ ಟೆಲಿ ಧಾರಾವಾಹಿ “ಇದೆಂತಾ ಕತಿ ಮಾರ್ರೆ” ಯಲ್ಲಿ ಕುಡುಕನ ಪಾತ್ರ ನಿರ್ವಹಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.

ಸಂತಾಪ: ಚೇತನಾ ಕಲಾರಂಗದ ಅಧ್ಯಕ್ಷ, ಶ್ರೀನಿವಾಸ ಕುಂದರ್, ಗೌರವಾಧ್ಯಕ್ಷ ಮಾರ್ಕೊಡು ಗೋಪಾಲಕೃಷ್ಣ ಶೆಟ್ಟಿ, ಕಾರ್ಯದರ್ಶಿ ಗಣೇಶ್ ಐತಾಳ್, ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಜೋಗಿ, ಬಿ. ಎಂ. ಗುರುರಾಜ ರಾವ್ ಹಾಗೂ ಅಪಾರ ಅಭಿಮಾನಿಗಳು ಕುಂಭಾಶಿಯ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು. ಸಂಸ್ಥೆಯ ಇನ್ನೋರ್ವ ಗೌರವಾಧ್ಯಕ್ಷ ನೇರಂಬಳ್ಳಿ ರಾಘವೇಂದ್ರ ರಾವ್ ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!