spot_img
Thursday, March 26, 2026
spot_img

ಸಮಾಜ ಸೇವಕ ವಂಡ್ಸೆ ರಮೇಶ್ ದೇವಾಡಿಗರಿಗೆ ಡಾ.ಪುನೀತ್ ರಾಜ್‌ಕುಮಾರ್ ಪ್ರಶಸ್ತಿ ಪ್ರದಾನ

ಕುಂದಾಪುರ: ಸಮಾಜದಲ್ಲಿ ಸೇವಾ ಮನೋಭಾವವನ್ನು ಮೈಗೂಡಿಸಿಕೊಂಡು, ಬಡವರಿಗೆ, ಸೂರಿಲ್ಲದವರಿಗೆ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹಾಗೂ ವೈದ್ಯಕೀಯ ನೆರವು ಪೀಡಿತರಿಗೆ ಸಹಾಯ ಹಸ್ತ ನೀಡುತ್ತಿರುವ ಬೆಂಗಳೂರು ಉದ್ಯಮಿ, ವಂಡ್ಸೆ ರಮೇಶ್ ದೇವಾಡಿಗ ಇವರ ಸಮಾಜ ಸೇವೆಯನ್ನು ಗುರುತಿಸಿ ಮಲತ್ತಹಳ್ಳಿ ಸ್ಪೋರ್ಟ್ಸ್ ಕ್ಲಬ್ (ರಿ) ಬೆಂಗಳೂರು, ವತಿಯಿಂದ ಡಾ. ಪುನೀತ್ ರಾಜ್‌ಕುಮಾರ್ ಪ್ರಶಸ್ತಿ-2022 ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಲತ್ತಹಳ್ಳಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಲಿಂಗರಾಜು ಗೌಡ, ಮಲತ್ತಹಳ್ಳಿ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀ, ಇತಿಹಾಸ ತಜ್ಞರಾದ ಧರ್ಮೇಂದ್ರ ಮುಂತಾದವರು ಉಪಸ್ಥಿತರಿದ್ದರು.
ಉಚಿತ ಕಣ್ಣಿನ ತಪಾಸಣೆ, ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು.

ರಮೇಶ ದೇವಾಡಿಗರು ಅಂತರಾಷ್ಟ್ರೀಯ ಸೇವಾ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಸಾಕಷ್ಟು ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸ ಮೊಟುಕುಗೊಳಿಸುವ ಹಂತ ತಲುಪಿದ ವಿದ್ಯಾರ್ಥಿಗಳಿಗೆ ನೆರವು, ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ನೆರವು, ಮನೆ ನಿರ್ಮಿಸಿಕೊಳ್ಳಲಾಗದ ಕುಟುಂಬಗಳಿಗೆ ಸೂರು ನಿರ್ಮಿಸಿಕೊಳ್ಳುವಲ್ಲಿ ಸಹಕಾರ ನೀಡುತ್ತಾ ಬಂದಿದ್ದಾರೆ. ಸೇವಾಸಕ್ತ ಸಂಘಸಂಸ್ಥೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಇವರ ಸೇವಾಸಂದತೆಗೆ ಯೋಗ್ಯವಾಗಿಯೇ ಪ್ರಶಸ್ತಿ ಸಂದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!