spot_img
Friday, March 27, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವಕ್ಕೆ ಚಾಲನೆ


ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾರ್ಚ್ 18 ರಿಂದ 27ರ ತನಕ ನಡೆಯಲಿರುವ ವಾರ್ಷಿಕ ಉತ್ಸವ ಸಲುವಾಗಿ ಮಾರ್ಚ್ 18 ರಂದು ಬೆಳಗ್ಗಿನ ಜಾವ ದೇಗುಲದಲ್ಲಿ ಗಣಪತಿ ಪ್ರಾರ್ಥನೆ, ನಾಂದಿ ಪುಣ್ಯಾಹ, ಅಂಕುರಾಧಿವಾಸ, ಸಿಂಹಯಾಗ, ವೃಷಭ ಲಗ್ನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಮನ್ಮಹಾರಥೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ದೇಗುಲದ ತಂತ್ರಿ ಡಾ.ರಾಮಚಂದ್ರ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು. ದೇಗುಲದ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ ಮಹೇಶ್ ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಧ್ವಜಾರೋಹಣಕ್ಕೆ ಚಾಲನೆ ನೀಡಿದರು. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ್, ಸಮಿತಿಯ ಸದಸ್ಯರಾದ ರತ್ನ ರಮೇಶ್ ಕುಂದರ್, ಸಂಧ್ಯಾ ರಮೇಶ್, ಗಣೇಶ್ ಕಿಣಿ, ಶೇಖರ್ ಪೂಜಾರಿ, ಅತುಲ್ ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ, ಜಯಾನಂದ ಹೋಬಳಿದಾರ್, ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಮೇಶ ಗಾಣಿಗ, ದೇಗುಲದ ಅರ್ಚಕರಾದ ಕೆ. ಎನ್. ಗೋವಿಂದ ಅಡಿಗ, ಸುಬ್ರಮಣ್ಯ ಅಡಿಗ ಹಾಗೂ ಗಜಾನನ ಜೋಯಿಸ್, ಸುರೇಶ್ ಭಟ್, ಕಾಳಿದಾಸ ಭಟ್ ಉಪಸ್ಥಿತರಿದ್ದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಶುಕ್ರವಾರ ಬೆಳಿಗ್ಗೆ ದೇವಳದ ತಂತ್ರಿ ಡಾ.ರಾಮಚಂದ್ರ ಅಡಿಗ ನೇತೃತ್ವದಲ್ಲಿ ದೇವಳದ ಪಶ್ಚಿಮ ದ್ವಾರ (ಆನೆಬಾಗಿಲು)ಕ್ಕೆ ಚಿನ್ನದ ಲೇಪನದ ಶಿಖರ (ಸ್ವರ್ಣಕಲಶ) ಪ್ರತಿಷ್ಠೆ ಮಾಡಲಾಯಿತು. ಸಂಜೆ ಯಾಗಶಾಲಾ ಪ್ರವೇಶ, ರಜ್ಜು ಬಂಧನ, ಮೂಹೂರ್ತ ಬಲಿ, ಭೇರಿತಾಡನ, ಕೌತುಕ ಬಂಧನ ಹಾಗೂ ನಗರೋತ್ಸವ ನಡೆಯಿತು. ಮಾರ್ಚ್ 25ರ ಸಂಜೆ 5 ಗಂಟೆಗೆ ಮನ್ಮಹಾರಥೋತ್ಸವ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!