spot_img
Wednesday, January 22, 2025
spot_img

ಮೊವಾಡಿ: ಯಂತ್ರೀಕೃತ ಹೂಳೆತ್ತುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ: ತ್ರಾಸಿ ಗ್ರಾಮದ ಸೌಪರ್ಣಿಕ ನದಿಯಲ್ಲಿ ನಡೆಯುತ್ತಿರುವ ಯಂತ್ರೀಕೃತ ಹೂಳೆತ್ತುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ತ್ರಾಸಿ, ಮೊವಾಡಿ ಹಾಗೂ ನಾಡ ಗುಡ್ಡೆಯಂಗಡಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೋರೇಶನ್ ಲಿಮಿಟಿಡ್ ಕಂಪೆನಿಯು ತ್ರಾಸಿ ಹಾಗೂ ಹೊಸಾಡು ಗ್ರಾಮದ ಸೌಪರ್ಣಿಕ ನದಿಯಲ್ಲಿ ಯಾಂತ್ರೀಕೃತ ಹೂಳೆತ್ತುವ ಕಾಮಗಾರಿ ನಡೆಸುತ್ತಿದೆ. ಇದರಿಂದ ನದಿ ಸುತ್ತಮುತ್ತಲಿನ ಗ್ರಾಮದ ನದಿ ದಂಡೆಗೆ ಹಾನಿಯಾಗಲಿದೆ. ಬಾವಿ ನೀರಿನಲ್ಲಿ ಉಪ್ಪಿನ ಅಂಶ ಕಾಣಿಸಿಕೊಂಡಿದೆ. ಯಾಂತ್ರೀಕೃತ ಹೂಳೆತ್ತುವ ಸ್ಥಳದ ಸಮೀಪದಲ್ಲಿರುವ ಡ್ಯಾಮ್ ಇದ್ದು, ಅದಕ್ಕೆ ಹಾನಿಯಾಗುವ ಹೋಗುವ ಸಾಧ್ಯತೆ ಇದೆ, ಪ್ರತಿನಿತ್ಯ ನೂರಾರು ಲಾರಿಗಳು ಅಗಲಕಿರಿದಾದ ರಸ್ತೆಯಲ್ಲಿ ಹಗಲಿರುಳೆನ್ನದೆ ಸಂಚರಿಸುತ್ತಿರುವುದರಿಂದ ರಸ್ತೆಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ. ಹೀಗಾಗಿ ಈ ಪ್ರದೇಶದಲ್ಲಿ ನಡೆಯುತ್ತಿರುವ ಯಾಂತ್ರೀಕೃತ ಹೂಳೆತ್ತುವ (ಮರಳುಗಾರಿಕೆ) ಕಾಮಗಾರಿಯನ್ನು ಸ್ಥಗಿತಗೊಳಿಸಿ ಸಾಂಪ್ರದಾಯಿಕ ಮರಳುಗಾರಿಕೆ ಅವಕಾಶ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು ಪ್ರತಿಭಟನಾನಿರತರ ಬೇಡಿಕೆ ಆಲಿಸಿದರು.
ಗಣಿ ಇಲಾಖೆ ಅಧಿಕಾರಿಗಳಾದ ಸಂದೀಪ್, ಸಂಧ್ಯಾ, ವಂಡ್ಸೆ ಹೋಬಳಿ ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ, ಗಂಗೊಳ್ಳಿ ಪೊಲೀಸ್ ಠಾಣೆ ಉಪನಿರೀಕ್ಷಕ ನಂಜಾ ನಾಯ್ಕ್, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಪ್ರಣಯ್ ಕುಮಾರ್ ಶೆಟ್ಟಿ, ತಾಪಂ ಮಾಜಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ನಾಡ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ ಶೆಟ್ಟಿ, ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಚೇತನ್, ತ್ರಾಸಿ ಗ್ರಾಪಂ ಸದಸ್ಯ ಮಿಥುನ್ ದೇವಾಡಿಗ, ಶ್ರೀಧರ ಬಡಾಕೆರೆ, ರಾಘವೇಂದ್ರ ಆಚಾರ್, ನಾಗರಾಜ ಮೊಗವೀರ, ಅಶೋಕ್ ಶೆಟ್ಟಿ, ಸರೋಜ, ಪ್ರವೀಣ್ ಮೊವಾಡಿ, ಸತೀಶ ಮೊವಾಡಿ, ಕಿರಣ್ ಆನಗೋಡು ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!