spot_img
Wednesday, June 24, 2026
spot_img

ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಲ್ ಮಾಡೆಲ್ ಸ್ಕೂಲ್ ಪ್ರಶಸ್ತಿ

ಕುಂದಾಪುರ: ನವದೆಹಲಿಯ ಶ್ರೀ ಅರಬಿಂದೊ ಸೊಸೈಟಿ ಸಂಸ್ಥೆಯವರು ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಲ್ ಮಾಡೆಲ್ ಸ್ಕೂಲ್ ಪ್ರಶಸ್ತಿ ನೀಡಿ ಗೌರವಿಸಿದೆ.

ಶಾಲೆಯಲ್ಲಿ ನಡೆಯುವ ಶೈಕ್ಷಣಿಕ ಚಟುವಟಿಕೆಗಳ ಸ್ಥೂಲ ಮಾಹಿತಿ ಆಧಾರದ ಮೇಲೆ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಕಲಾತ್ಮಕವಾಗಿ ಜಾರಿಗೊಳಿಸಿದ ಹಿನ್ನಲೆಯಲ್ಲಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗೆ ರೋಲ್ ಮಾಡೆಲ್ ಸ್ಕೂಲ್ ಪ್ರಶಸ್ತಿ ನೀಡಿ ಗೌರವಿಸಿದೆ.

2020ರಲ್ಲಿ ಜಾರಿಯಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನದ ಪೂರ್ವಭಾವಿಯಾಗಿ ಉಡುಪಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಶಾಲೆಗೆ ರೋಲ್ ಮಾಡೆಲ್ ಸ್ಕೂಲ್ ಪ್ರಶಸ್ತಿ ಬಂದಿರುವುದಕ್ಕೆ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮತಿ ಎಂ., ಸಹಶಿಕ್ಷಕರು, ಎಸ್‌ಡಿ‌ಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ, ಎಸ್‌ಡಿ‌ಎಂಸಿ ಸದಸ್ಯರು ಸಂತಸ ವ್ಯಕ್ತಪಡಿಸಿ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!