Sunday, September 8, 2024

ಏ.1ರಿಂದ 15ರವರೆಗೆ ಉಚ್ಚಿಲ ಮಹಾಲಕ್ಷ್ಮಿ ದೇವಳ ಪುನರ್ ಪ್ರತಿಷ್ಠಾಪನೆ

ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಕಾಪು ತಾಲ್ಲೂಕಿನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನವನ್ನು 32 ಕೋಟಿ ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರ ಗೊಂಡಿದ್ದು ಏ1.ರಿಂದ ಏ. 15ರವರೆಗೆ ಪುನರ್ ಪ್ರತಿಷ್ಠಾಪನೆ ಸಹಿತ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ನಾಡೋಜ ಡಾ. ಜಿ.ಶಂಕರ್ ಹೇಳಿದರು.

ಗುರುವಾರ ಉಚ್ಚಿಲದ ಮೊಗವೀರ ಭವನದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 67 ವರ್ಷಗಳ ಬಳಿಕ ದೇವಸ್ಥಾನ ಜೀರ್ಣೋದ್ದಾರಗೊಂಡಿದೆ. ಹೊಯ್ಸಳ ಮಾದರಿ ಹಾಗೂ ಕಾಷ್ಟಶಿಲ್ಪಗಳು ದೇವಸ್ಥಾನ ನಿರ್ಮಾಣಗೊಂಡಿದೆ. ಶಿಲಾಮಯ ಗರ್ಭಗುಡಿ, ಶಿಲಾಮಯ ಭದ್ರಕಾಳಿ ಗುಡಿ, ಶಿಲಾಮಯ ಪ್ರಸನ್ನ ಗಣಪತಿ ಗುಡಿ, ನಾಗದೇವರ ಗುಡಿ, ಸುತ್ತುಪೌಳಿ, ಗುರುಪೀಠ, ರಾಜ ಗೋಪುರ, ಯಾಗಶಾಲೆ, ವಸಂತ ಮಂಟಪ, ರಥಬೀದಿ, ಸುತ್ತು ಆವರಣ ಗೋಡೆ, ಬಯಲು ರಂಗ ಮಂಟಪ, ಒಳಚರಂಡಿ ವ್ಯವಸ್ಥೆ, ನೆಲಹಾಸು ಪುಷ್ಕರಣೆಯ ನಿರ್ಮಿಸಲಾಗಿದೆ ಎಂದರು.

ಸಮಗ್ರ ಜೀರ್ಣೋದ್ಧಾರ ಪೂರ್ಣಗೊಂಡಿದ್ದು, ಶಿಲೆ, ದಾರು ಶಿಲ್ಪಗಳಿಂದ ದೇವಾಲಯದಲ್ಲಿ ಪ್ರಸನ್ನ ಗಣಪತಿ, ಭದ್ರಕಾಳಿ, ನಾಗದೇವರ ಸಹಿತ ಮಹಾಲಕ್ಷಮೀ ದೇವಿಯ ಬಿಂಬ ಪುನರ್ ಪ್ರತಿಷ್ಠಾಪನೆ ಮಾಡಲಾಗಿದೆ ಜತೆಗೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವಗಳು ಏ.1ರಿಂದ 15ರವರೆಗೆ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ನೇತೃತ್ವದಲ್ಲಿ ಹಾಗೂ ಅರ್ಚಕರಾದ ವೆಂಕಟ ನರಸಿಂಹ ಉಪಾಧ್ಯಾಯ ಹಾಗೂ ರಾಘವೇಂದ್ರ ಉಪಾಧ್ಯಾಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಪ್ರತಿದಿನ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ 3 ಲಕ್ಷ ಜನ ಭಾಗಹಿಸುವ ನಿರೀಕ್ಷೆ ಇದೆ ಎಂದರು.

ಗರ್ಭಗುಡಿಯಲ್ಲಿರುವ ದೇವರನ್ನು ಹತ್ತಿರದಿಂದ ವೀಕ್ಷಿಸಲು ಸಾಧ್ಯವಾಗುತ್ತಿರಲಿಲ್ಲ. ದೇವರನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹಲವು ಭಕ್ತರು ಸಮಸ್ಯೆ ಹೇಳಿಕೊಂಡಿದ್ದರು. ಗರ್ಭಗುಡಿಯನ್ನು ನವೀಕರಣಗೊಳಿಸಲಾಗಿದ್ದು, ಈಗ ಹತ್ತಿರದಿಂದ ದೇವರನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗಿದೆ ಎಂದರು.
ಉಚ್ಚಿಲ ಮಹಾಲಕ್ಷಿ ದೇವಸ್ಥಾನವನ್ನು ಧಾರ್ಮಿಕ, ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಮಾಡುವ ಉದ್ದೇಶವಿದೆ. 16 ಎಕರೆ ದೇವಸ್ಥಾನದ ಚಟುವಟಿಕೆಗಳಿಗೆ ಬಳಕೆ ಮಾಡುವ ಉದ್ದೇಶವಿದ್ದು, ಬಡ ವಿದ್ಯಾರ್ಥಿಗಳಿಗೆ ವಸತಿ ನಿಲಯ, ಕೌಶಲಭಿವೃದ್ಧಿ ಕೇಂದ್ರ ನಿರ್ಮಾಣ ಹಾಗೂ ಮೀನುಗಾರಿಕೆಗೆ ಪೂರಕವಾದ ಚಟುವಟಿಕೆಗಳಿಗೆ 9 ಎಕರೆ ಮೀಸಲಿಡಲಾಗಿದೆ ಎಂದರು.

ಸಭಾ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಗಣ್ಯರು, ಮಠಾಧೀಪತಿಗಳು ಭಾಗವಹಿಸಲಿದ್ದಾರೆ. 20 ರಾಜ್ಯಗಳ ಕಲಾವಿದರಿಂದ ಸಾಂಸ್ಕೃತಿಕ ಉತ್ಸವ ಏರ್ಪಡಿಸಲಾಗಿದೆ. ರಾಜ್ಯ ಹಾಗೂ ಸ್ಥಳೀಯ ಕಲಾವಿದರು ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು.

ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ.ಅಮೀನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಕ್ಷೇತ್ರದ ಅರ್ಚಕರಾದ ರಾಘವೇಂದ್ರ ಉಪಾದ್ಯಾಯ, ಮೊಗವೀರ ಮಹಾಜಲ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸುಧಾಕರ್ ಕುಂದರ್, ಉಪಾಧ್ಯಕ್ಷ ಸುಭಾಶ್ಚಂದ್ರ್ ಕಾಂಚನ್, ಕೋಶಾಧಿಕಾರಿ ವಿನಯ್ ಕರ್ಕೇರ, ಕಾರ್ಯದರ್ಶಿ ಶಂಕರ್ ಸಾಲ್ಯಾನ್, ಕೋಶಾಧಿಕಾರಿ ಭರತ್ ಎರ್ಮಾಳ್, ಜತೆ ಕಾರ್ಯದರ್ಶಿ ಮೋಹನ್ ಕರ್ಕೇರ ತೋನ್ಸೆ, ಗಂಗಾಧರ ಸುವರ್ಣ ಎರ್ಮಾಳ್ ಉಪಸ್ಥಿತರಿದ್ದರು.

ಮಾ.27ಕ್ಕೆ ಅವಿಭಜಿತ ದ.ಕ ಜಿಲ್ಲೆಯ ದೇವಸ್ಥಾನಗಳಿಂದ ಹೊರೆಕಾಣಿಕೆ ಬರಲಿದೆ. ಎ.1ರಂದು ರಾಜಗೋಪುರ ಹಾಗೂ ಲಕ್ಷ್ಮೀತೀರ್ಥ ಕೆರೆ ಉದ್ಘಾಟನೆ ನಡೆಯಲಿದೆ. ಎ.6ರಂದು ಮಹಾಲಕ್ಷ್ಮೀದೇವಿಯ ಬಿಂಬ ಪ್ರತಿಷ್ಠೆ, ಸ್ವರ್ಣ ಕಲಶ ಪ್ರತಿಷ್ಠೆ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಎ.15ರಂದು ರಾತ್ರಿ 9 ಗಂಟೆಯಿಂದ ಚತುಃಪವಿತ್ರ ನಾಗಮಂಡಲೋತ್ಸವ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!