Sunday, September 8, 2024

ಮೀನುಗಾರರ ಉಳಿತಾಯ ಪರಿಹಾರ ಯೋಜನೆ ಬಾಕಿ ಮೊತ್ತ ಬಿಡುಗಡೆಗೆ ಮನವಿ

ಗಂಗೊಳ್ಳಿ : ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು ಅವರು ರಾಜ್ಯದ ಮೀನುಗಾರಿಕೆ ಇಲಾಖೆ ನಿರ್ದೇಶಕ ರಾಮಾಚಾರಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಮೀನುಗಾರರ ಉಳಿತಾಯ ಪರಿಹಾರ ಯೋಜನೆಯಲ್ಲಿ 2020-21 ನೇ ಸಾಲಿನಲ್ಲಿ ಮೂರು ಸಾವಿರ ರೂ. ಬಂದಿದ್ದು ಇನ್ನೂ 1500.00 ಬಾಕಿ ಇದೆ. ಅದೇ ರೀತಿ 2017-18 ಮತ್ತು 2019-20ನೇ ಸಾಲಿನಲ್ಲಿ 1500.00 ರೂ. ಬಂದಿದ್ದು 3000.00 ರೂ. ಬಾಕಿ ಇದೆ. ಆದ್ದರಿಂದ ಆದಷ್ಟು ಬೇಗ ಬಾಕಿ ಇರುವ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ನಿರ್ದೇಶಕರಲ್ಲಿ ಮನವಿ ಮಾಡಿದ ಸದಾಶಿವ ಖಾರ್ವಿ, ಗಂಗೊಳ್ಳಿ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಮತ್ತು ಇನ್ನಿತರ ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಗಂಗೊಳ್ಳಿ ಮೀನುಗಾರಿಕಾ ಬಂದರಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!