Sunday, September 8, 2024

ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಅಬ್ಬಿ: ವರ್ಧಂತ್ಯುತ್ಸವ, ಧಾರ್ಮಿಕ ಸಭೆ

ಕುಂದಾಪುರ: ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಗ್ರಾಮದ ಅಭ್ಯುದಯ ಸಾಧ್ಯ. ಭಜನೆಯಿಂದ ಭಗವಂತನ ಕೃಪೆಗೆ ಪಾತ್ರರಾಗಬಹುದು. ಮನೆಮನೆಯಲ್ಲಿ ಭಜನೆ, ಧಾರ್ಮಿಕತೆ ಚಟುವಟಿಕೆಗಳನ್ನು ಪ್ರೇರೆಪಿಸುವ ಸತ್ಕಾರ್ಯದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ಅವರು ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಅಬ್ಬಿ ವಂಡ್ಸೆ ಇಲ್ಲಿನ ಐದನೇ ವರ್ಷದ ವರ್ಧಂತ್ಯುತ್ಸವ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ವೇ.ಮೂ.ದಿನಕರ ಉಡುಪರು ಆಶೀರ್ವಚನ ನೀಡಿದರು.

ವರ್ಧಂತ್ಯೋತ್ಸವ ಸಮಿತಿ ಅಧ್ಯಕ್ಷ ಅಶ್ವತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಗೌರವಾಧ್ಯಕ್ಷರಾದ ವಂಡ್ಸೆ ಸಿ.ಎ ಬ್ಯಾಂಕ್ ನಿರ್ದೇಶಕರಾದ ಜಯರಾಮ ಶೆಟ್ಟಿ, ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ವೆಂಕಟೇಶ್ ಶೆಟ್ಟಿ ತೆಂಕೊಡಿಗೆಮನೆ, ಶ್ರೀಧರ ಹೆಗ್ಡೆ ಅಬ್ಬಿ, ತಾ.ಪಂ.ಮಾಜಿ ಸದಸ್ಯ ಉದಯ ಜಿ. ಪೂಜಾರಿ, ಗ್ರಾ.ಪಂ ಸದಸ್ಯ ಗೋವರ್ದನ್ ಜೋಗಿ ಹರವರಿ, ಗ್ರಾ.ಪಂ ಮಾಜಿ ಸದಸ್ಯ ಗುಂಡು ಪೂಜಾರಿ, ಆಡಳಿತ ಮಂಡಳಿಯ ಸದಸ್ಯ, ಶಿಕ್ಷಕ ವೀರೇಂದ್ರ ಜೋಗಿ, ಆಡಳಿತ ಮಂಡಳಿಯ ಸದಸ್ಯ, ಆಶೀರ್ವಾದ್ ಫ್ರೆಂಡ್ಸ್ ಅಧ್ಯಕ್ಷ ಮಹೇಶ್ ಗಾಣಿಗ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಂಡ್ಸೆ ಐತಾಳ್ ಕ್ಲಿನಿಕ್‌ನ ವೈದ್ಯ ಡಾ.ಕೌಶಿಕ್ ಐತಾಳ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೊಳ್ತ, ವಾಸು ಗಾಣಿಗ ಅಬ್ಬಿ ಅವರನ್ನು ಸನ್ಮಾನಿಸಲಾಯಿತು.

ಆಡಳಿತ ಮಂಡಳಿ ಸದಸ್ಯ ವೀರೇಂದ್ರ ಜೋಗಿ ಸ್ವಾಗತಿಸಿದರು. ತೆಂಕೊಡಿಗೆ ಸ.ಕಿ.ಪ್ರಾ.ಶಾಲೆ ಶಿಕ್ಷಕ ಉದಯ ಕಾರ್ಯಕ್ರಮ ನಿರ್ವಹಿಸಿದರು. ವಿಜಯ ಪೂಜಾರಿ ವಂದಿಸಿದರು.

ಬಳಿಕ ಶ್ರೀ ಬನಶಂಕರಿ ಮಹಿಳಾ ಭಜನಾ ಮಂಡಳಿ ಮಲ್ಲುಗುಡ್ಡೆ ಪೆರ್ಡೂರು ಹಾಗೂ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ಭಜನಾ ಮಂಡಳಿ ವಂಡ್ಸೆ ಇವರಿಂದ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು. ಅತಿಥಿಗಳಿಗೆ ಗಿಡಗಳನ್ನು ಸ್ಮರಣಿಕೆಯಾಗಿ ನೀಡಲಾಯಿತು.
ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಹೈದರಬಾದ್ ಉದ್ಯಮಿ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ ಇವರ ಪ್ರಾಯೋಜಕತ್ವದಲ್ಲಿ ಅನ್ನಸಂತರ್ಪಣೆ ನಡೆಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!