spot_img
Sunday, March 29, 2026
spot_img

ಎ.14ರಿಂದ 16: ಕುಂದಾಪುರದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಕುಂದಾಪುರ, ಎ.5: ಉಡುಪಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಎಪ್ರಿಲ್ 14, 15, 16 ಮೂರು ದಿನಗಳ ಕಾಲ ಕುಂದಾಪುರದ ಸ.ಪ.ಪೂ ಕಾಲೇಜು ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆಯಲಿದ್ದು ಹಿರಿಯ ಸಾಹಿತಿ, ಸಂಶೋಧಕ ಪ್ರೊ.ಎ.ವಿ ನಾವಡ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು.

ಅವರು ಕುಂದಾಪುರ ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಎ.14 ಗುರುವಾರ ಮಧ್ಯಾಹ್ನದಿಂದ ಸಾಂಸ್ಕೃತಿಕ ಕಾರ್ಯಕ್ರಮ ಆರಂಭವಾಗಲಿದ್ದು ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಕೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಯಕ್ಷಗಾನ ತಾಳಮದ್ದಲೆ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಸುರಭಿ ಬೈಂದೂರು ಇವರಿಂದ ನಾಟಕ, ಹೋಳಿ ಕುಣಿತ ಮೊದಲಾದ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಎ.15ರಂದು ಬೆಳಿಗ್ಗೆ ಧ್ವಜಾರೋಹಣ, ಮೆರವಣಿಗೆ ನಡೆದು ಪೂರ್ವಾಹ್ನ 10 ಗಂಟೆಗೆ ಸಮ್ಮೇಳನವನ್ನು ರಾಜ್ಯದ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಕುಂದಾಪುರ ಕನ್ನಡ ಹರಟೆ, ರಂಗಭೂಮಿ, ಶಾಸನಗಳ ಬಗ್ಗೆ ಗೋಷ್ಠಿ, ಯಕ್ಷಗಾನ, ಪತ್ರಿಕೋದ್ಯಮ, ಮಹಿಳಾ ಸಮಾನತೆ ಕುರಿತಾದ ಗೋಷ್ಠಿ, ರಾಷ್ಟ್ರೀಯತೆ ಬಗ್ಗೆ ವಿಶೇಷ ಉಪನ್ಯಾಸ ನಡೆಯಲಿದೆ. ಎ.16ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ನಾಡು ನುಡಿ ವಿಚಾರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಗುವುದು. ನಿವೃತ್ತ ಪ್ರಾಂಶುಪಾಲರಾದ ಬಾಲಕೃಷ್ಣ ಶೆಟ್ಟಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಸದಸ್ಯರಾಗಬೇಕಾಗಿದೆ. ಆದರಿಂದ ಸಾಹಿತ್ಯ ಪರಿಷತ್ ಬಲಿಷ್ಠವಾಗುವುದರೊಂದಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಸಾಧ್ಯವಾಗುತ್ತದೆ. ಸಾಹಿತ್ಯ ಚಟುವಟಿಕೆಗಳು ವೃದ್ದಿಯಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಸಾಪ ಕುಂದಾಪುರ ತಾಲೂಕು ಅಧ್ಯಕ್ಷರಾದ ಡಾ.ಉಮೇಶ ಪುತ್ರನ್, ಕಸಾಪ ಜಿಲ್ಲಾ ಕೋಶಾಧಿಕಾರಿ ಮನೋಹರ್, ಕುಂದಾಪುರ ಘಟಕದ ಕಾರ್ಯದರ್ಶಿ ದಿನಕರ ಆರ್ ಶೆಟ್ಟಿ, ಕೋಶಾಧಿಕಾರಿ ಮಂಜುನಾಥ್ ಕೆ.ಎಸ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!