spot_img
Sunday, March 29, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ರಾಷ್ಟ್ರೀಯ ಪ್ರತಿಭೆಗೆ ಸನ್ಮಾನ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆ ಇಲ್ಲಿ NTSE ಪರೀಕ್ಷೆಯಲ್ಲಿ ಉತ್ತೀರ್ಣಳಾದ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಳಿಗೆ ಸನ್ಮಾನ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಉಪನ್ಯಾಸಕಿ, ಸಾಹಿತಿ ಡಾ. ಪಾರ್ವತಿ ಜಿ. ಐತಾಳ್, ಇವರು ಸನ್ಮಾನ ಹಾಗೂ ಬಹುಮಾನ ವಿತರಣಾ ಕಾರ್‍ಯಕ್ರಮ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ತಮ್ಮನ್ನು ತಾವು ಪರಿಪಕ್ವಗೊಳಿಸಲು ಸಾಹಿತ್ಯ, ಕಲೆ ಹಾಗೂ ಓದಿನ ಕಡೆಗೆ ಗಮನ ಹರಿಸಿ ಸಾಧನೆಯನ್ನು ಮಾಡಬೇಕು ಎಂದು ಹೇಳಿದರು.

ಸನ್ಮಾನಿತ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯ ಮಾತನಾಡಿ ತನ್ನ ಈ ರಾಷ್ಟ್ರಮಟ್ಟದ ಸಾಧನೆಗೆ ಪೋಷಕರು, ಅಧ್ಯಾಪಕರು ಹಾಗೂ ಶಾಲೆಯ ಸೂಕ್ತ ಮಾರ್ಗದರ್ಶನ ಹಾಗೂ ಸ್ವಯಂ ಪರಿಶ್ರಮ ಸಹಕಾರಿಯಾಯಿತು ಎಂದು ತಿಳಿಸಿದರು.

ಶಾಲೆಯ ಮೇನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿಯವರು ಮಾತನಾಡಿ ಎಲ್ಲ ವಿದ್ಯಾರ್ಥಿಗಳು ಈ ಸನ್ಮಾನ ಕಾರ್‍ಯಕ್ರಮದಿಂದ ಪ್ರೇರಿತರಾಗಿ ಇನ್ನಷ್ಟು ಪ್ರತಿಭೆಗಳು ನಮ್ಮ ಸಂಸ್ಥೆಯಿಂದ ಹೊರ ಹೊಮ್ಮಬೇಕೆಂದು ತಿಳಿಸಿದರು. ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ ಆಲ್ಮೇಡಾರವರು ಮಾತನಾಡಿ ಶೃದ್ಧೆ ಹಾಗೂ ಪರಿಶ್ರಮದಿಂದ ಮುನ್ನಡೆದರೆ ಪ್ರತೀ ವಿದ್ಯಾರ್ಥಿಯೂ ಶ್ರೇಷ್ಠ ಮಟ್ಟದ ಸಾಧನೆಗಳನ್ನು ಮಾಡಬಹುದು ಎಂದು ತಿಳಿಸಿದರು.

ಕಾರ್‍ಯಕ್ರಮದಲ್ಲಿ ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶ್ರೀಮತಿ ಪ್ರೀಯಾ ಜೇಮ್ಸ್ ಸ್ವಾಗತಿಸಿದರು, ರವೀಂದ್ರ ಕಾರ್ಕಡ ಸನ್ಮಾನ ಪತ್ರ ವಾಚಿಸಿದರು, ಹಾಗೂ ಶ್ರೀಮತಿ ದೀಕ್ಷಾ ಕೊಟ್ಯಾನ್ ಕಾರ್‍ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!