spot_img
Wednesday, January 22, 2025
spot_img

ಎ.17ರಿಂದ ಮಾರ್ಗ ಮಾರ್ಪಾಡಿನೊಂದಿಗೆ ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ

2019-20 ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ರವರ ಪ್ರಯತ್ನದ ಫಲವಾಗಿ ಶಿವಮೊಗ್ಗ -ರೇಣಿಗುಂಟ (ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಮದ್ರಾಸ್ ಎಕ್ಸಪ್ರೆಸ್ ವಾರಕ್ಕೆ ಎರಡು ಭಾರಿ ಸಂಚರಿಸುವ ರೈಲು ಸೇವೆಗಳನ್ನು ಆರಂಭಿಸಲಾಗಿತ್ತು. ಕೋವಿಡ್ ಸಾಂಕ್ರಾಂಮಿಕ ರೋಗ ಉಲ್ಬಣಗೊಂಡ ಹಿನ್ನೆಲೆಯಲ್ಲಿ ದೇಶದಾದ್ಯಂತ ರೈಲು ಸೇವೆಗಳನ್ನು ನಿಲುಗಡೆ ಮಾಡಿದ ಸಂದರ್ಭದಲ್ಲಿ ಈ ಎರಡು ರೈಲು ಸೇವೆಗಳನ್ನು ಸಹ ರೈಲ್ವೆ ಇಲಾಖೆಯಿಂದ ಹಿಂಪಡೆಯಲಾಗಿತ್ತು.

ಈ ಹಿಂದೆ ಶಿವಮೊಗ್ಗದಿಂದ ತಿರುಪತಿಗೆ ಹೊರಡುವ ರೈಲು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು ರಾತ್ರಿ 8 ಗಂಟೆಗೆ ರೇಣಿಗುಂಟವನ್ನು ತಲುಪಿ ಅರ್ಧ ಗಂಟೆಯ ನಂತರ ಕೂಡಲೇ ಶಿವಮೊಗ್ಗಕ್ಕೆ ಮರು ಪ್ರಯಾಣವನ್ನು ಆರಂಭಿಸುತ್ತಿತ್ತು. ಇದರಿಂದಾಗಿ ಮಲೆನಾಡಿನ ಭಾಗದ ಯಾತ್ರಾರ್ಥಿಗಳಿಗೆ ಈ ರೈಲಿನಿಂದ ಹೆಚ್ಚಿನ ಅನುಕೂಲವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ-ಬೆಂಗಳೂರು ಮದ್ರಾಸ್ ಎಕ್ಸಪ್ರೆಸ್ ಹಾಗೂ ಶಿವಮೊಗ್ಗ-ರೇಣಿಗುಂಟ(ತಿರುಪತಿ) ರೈಲುಗಳನ್ನು ಒಗ್ಗೂಡಿಸಿ ಶಿವಮೊಗ್ಗದಿಂದ ತಿರುಪತಿ ಹಾಗೂ ಮದ್ರಾಸ್‌ಗೆ ತೆರಳುವ ಯಾತ್ರಾರ್ಥಿಗಳು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲಿನ ಸಮಯ ಹಾಗೂ ಮಾರ್ಗವನ್ನು ಬದಲಿಸಿ ಶಿವಮೊಗ್ಗ-ರೇಣಿಗುಂಟ-ಮದ್ರಾಸ್ ಎಕ್ಸಪ್ರೆಸ್ ರೈಲು ಸೇವೆಯನ್ನು ಆರಂಭಿಸುವಂತೆ ಸಂಸದರಾದ ಬಿ.ವೈ.ರಾಘವೇಂದ್ರರವರು ರೈಲ್ವೆ ಸಚಿವರನ್ನು ಹಲವಾರು ಬಾರಿ ಒತ್ತಾಯಿಸಿದ್ದರು.

ಸಂಸದರ ಪ್ರಯತ್ನದ ಫಲವಾಗಿ ದಿನಾಂಕ 17-04-2022 ರಿಂದ ಶಿವಮೊಗ್ಗ-ಮದ್ರಾಸ್-ಶಿವಮೊಗ್ಗ (ವಯಾ-ರೇಣಿಗುಂಟ (ತಿರುಪತಿ) ಎಕ್ಸಪ್ರೆಸ್ ರೈಲು ಸೇವೆಯು ಆರಂಭಗೊಳ್ಳುತ್ತಿದೆ.

ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದರಾಸ್‌ನಿಂದ ಸೋಮವಾರ ಮತ್ತು ಬುಧವಾರಗಳಂದು ಈ ರೈಲು ಸಂಚರಿಸಲಿದೆ.

ವಾರಕ್ಕೆ ಎರಡು ದಿನ ಸಂಚರಿಸುವ ಈ ರೈಲು ಸೇವೆಯು ಶಿವಮೊಗ್ಗದಿಂದ ಸಂಜೆ 7.00 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8.20 ಗಂಟೆಗೆ ರೇಣಿಗುಂಟವನ್ನು ಹಾಗೂ 11.10 ಕ್ಕೆ ಮದ್ರಾಸ್ ತಲುಪುತ್ತದೆ, ಅದೇ ದಿನ ಮದ್ರಾಸ್‌ನಿಂದ ಸಂಜೆ 3.50ಕ್ಕೆ ಹೊರಡುವ ಈ ರೈಲು ರೇಣಿಗುಂಟಕ್ಕೆ ಸಂಜೆ 6.10 ಕ್ಕೆ ತಲುಪಿ ಮರುದಿನ ಬೆಳಿಗ್ಗೆ 7.55ಕ್ಕೆ ಶಿವಮೊಗ್ಗವನ್ನು ತಲುಪಲಿದೆ.

ಮಲೆನಾಡು, ಕರಾವಳಿ ಹಾಗೂ ಶಿವಮೊಗ್ಗ ಭಾಗದ ಜನರು ರೇಣಿಗುಂಟಕ್ಕೆ ಮುಂಜಾನೆ ತಲುಪಿ ಸಂಜೆಯ ವೇಳೆಗೆ ತಿರುಪತಿಯಲ್ಲಿ ದೇವರ ದರ್ಶನ ಪಡೆದು ಅದೇದಿನ ರಾತ್ರಿ ಶಿವಮೊಗ್ಗ ಮರುಪ್ರಯಾಣ ಆರಂಭಿಸಲು ಈ ಬದಲಾದ ಸಮಯ ನೆರವಾಗಲಿದೆ. ಈ ಮೊದಲಿನ ರೈಲು ಸೇವೆಯು ಶಿವಮೊಗ್ಗದಿಂದ ಮುಂಜಾನ ತನ್ನ ಪ್ರಯಾಣವನ್ನು ಆರಂಭಿಸುತ್ತಿರುವುದರಿಂದ ಶಿವಮೊಗ್ಗದಿಂದ ತಿರುಪತಿಗೆ ತೆರಳಲು ಬಯಸುತ್ತಿದ್ದ ಯಾತ್ರಾರ್ಥಿಗಳು ಇಡೀ ದಿನವನ್ನು ರೈಲಿನಲ್ಲಿ ಕಳೆಯ ಬೇಕಾಗಿತ್ತು. ಬದಲಾದ ಸಮಯದ ಈ ರೈಲು ಸೇವೆಯಿಂದ ರಾತ್ರಿಯ ಪ್ರಯಾಣ (over night)ದ ಮೂಲಕ ತಿರುಪತಿಯನ್ನು ತಲುಪಬಹುದಾಗಿದೆ.

ಈ ರೈಲು ಸೇವೆಯಿಂದ ಮಲೆನಾಡಿನ ಜನತೆಯು ಚಿತ್ರದುರ್ಗ, ಬಳ್ಳಾರಿ, ಗುಂತಕಲ್ ಮೂಲಕ ರೇಣಿಗುಂಟ ಹಾಗೂ ಮದರಾಸಿನೊಂದಿಗೆ ಸಂಪರ್ಕ ಹೊಂದಲು ಸಾಧ್ಯವಾಗಲಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!