spot_img
Sunday, March 29, 2026
spot_img

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಪುತ್ರಿ ಸ್ವಾತಿ ಪೂಜಾರಿಗೆ ತೃತೀಯ ರ್‍ಯಾಂಕ್

ಕೋಟ :ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಸ್ನಾತಕೋತ್ತರ ಪರೀಕ್ಷೆಯಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿಗೆ ತೃತೀಯ ರ್‍ಯಾಂಕ್ ಬಂದಿದ್ದು, ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಪುತ್ರಿ ಸ್ವಾತಿ ಪೂಜಾರಿ ತೃತೀಯ ರ್‍ಯಾಂಕ್ ಪಡೆದಿದ್ದಾರೆ.

ರ್‍ಯಾಂಕ್ ವಿಜೇತೆ ಸ್ವಾತಿ ಪೂಜಾರಿ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಿದರು.

ಸನ್ಮಾನಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸಂಟ್ ಆಳ್ವ ಮಾತನಾಡಿ, ತಂದೆ ತಾಯಿಯ ಸರಳ ಸಜ್ಜನಿಕೆ ಆಚಾರ-ವಿಚಾರಗಳಿಂದ ಪ್ರಭಾವಿತರಾಗಿ, ಯಾವತ್ತು ಸಚಿವರ ಪುತ್ರಿ ಎಂದು ಹೇಳಿಕೊಳ್ಳದೆ ಕಾಲೇಜಿಗೆ ಕೀರ್ತಿ ತಂದಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿ, ಮಾತನಾಡಿದ ಸ್ವಾತಿ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನ ಐಕ್ಯೂ‌ಎಸಿ ಸಂಚಾಲಕರಾದ ಡಾ. ಸಿ. ಜಯರಾಮ್ ಶೆಟ್ಟಿಗಾರ ಕಾರ್ಯಕ್ರಮ ಸಂಯೋಜಿಸಿದ್ದರು. ಹೆಚ್.ಓ.ಡಿ ಪ್ರೊ. ಸೋಫಿಯಾ ಡಯಾಸ್. ಮಹಿಳಾ ಪ್ರಕೋಷ್ಠದ ಸಂಚಾಲಕಿ ಪ್ರೊ. ರೇಶ್ಮಾ, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊ. ರವಿನಂದನ್, ಶಾಂತಾ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!