Sunday, September 8, 2024

ಮಾರಣಕಟ್ಟೆಯಲ್ಲಿ ‘ಕಲ್ಪವೃಕ್ಷ’: ಸಾಧಕರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ

ಕುಂದಾಪುರ: ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ರಿ., ಮಾರಣಕಟ್ಟೆ, ಚಿತ್ತೂರು ಇವರ ಆಶ್ರಯದಲ್ಲಿ ದಿ.ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮ ಕಲ್ಪವೃಕ್ಷ ಕಾರ್ಯಕ್ರಮ ಎ.16 ಶನಿವಾರ ಸಂಜೆ 6.30ಕ್ಕೆ ಮಾರಣಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಗೌರವಾಧ್ಯಕ್ಷರಾದ ಶ್ರೀಧರ ಮಂಜರು ಉದ್ಘಾಟಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಅಧ್ಯಕ್ಷತೆ ವಹಿಸುವರು. ಈ ಸಂದರ್ಭದಲ್ಲಿ ಆಗಮ ಶಾಸ್ತ್ರಜ್ಞರಾದ ವೇ.ಮೂ.ಹೃಷಿಕೇಶ್ ಬಾಯರಿ ಬಾರಕೂರು, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ.ಅಪ್ಪಣ್ಣ ಹೆಗ್ಡೆ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಡಾ.ಮೋಹನ್ ಆಳ್ವ, ಯಕ್ಷಗಾನ ಕಲಾವಿದ ಗಾವಳಿ ಶೀನ ಕುಲಾಲ ಅವರನ್ನು ಸನ್ಮಾನಿಸಲಾಗುವುದು.

ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಮೊಕ್ತೇಸರ ಸದಾಶಿವ ಶೆಟ್ಟಿ, ಜಿ.ಪಂ ಮಾಜಿ ಸದಸ್ಯ ಬಾಬು ಹೆಗ್ಡೆ, ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮಂಜಯ್ಯ ಶೆಟ್ಟಿ ಸಬ್ಲಾಡಿ, ಮಾರಣಕಟ್ಟೆ ದೇವಸ್ಥಾನದ ಅರ್ಚಕರಾದ ನರಸಿಂಹ ಮಂಜರು ಭಾಗವಹಿಸಲಿದ್ದಾರೆ.

ಸಂಜೆ 6ಗಂಟೆಯಿಂದ ಸ.ಪ್ರೌ.ಶಾಲೆ ಚಿತ್ತೂರು ಹಾಗೂ ಸ.ಹಿ.ಪ್ರಾ.ಶಾಲೆ ಚಿತ್ತೂರು ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.30ರಿಂದ ಮಯ್ಯ ಯಕ್ಷ ಬಳಗ ಇವರಿಂದ ಭಾಗವತ ಜಿ.ರಾಘವೇಂದ್ರ ಮಯ್ಯ ನಿರ್ದೇಶನದಲ್ಲಿ ದಕ್ಷ ಯಜ್ಞ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸರ್ವರನ್ನು ಶ್ರೀಮತಿ ವಿಶಾಲಾಕ್ಷಿಯಮ್ಮ, ಮಕ್ಕಳು, ಮೊಮ್ಮಕ್ಕಳು ಮತ್ತು ಕುಟುಂಬಸ್ಥರು ಆಹ್ವಾನಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!