spot_img
Wednesday, January 22, 2025
spot_img

ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ಬ್ರಹ್ಮ ರಥೋತ್ಸವ ಸಂಪನ್ನ

ಕುಂದಾಪುರ: ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವ ಎಪ್ರಿಲ್ ೧೬ ಶನಿವಾರ ವಿಜೃಂಭಣೆಯಿಂದ ನಡೆಯಿತು.

ಎ.16ರಂದು ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ತಂತ್ರಿಗಳಾದ ವೇ.ಮೂ.ನಾಗೇಶ್ವರ ಭಟ್ ದೇವಲ್ಕುಂದ ಹಾಗೂ ಅರ್ಚಕರಾದ ಭಾಸ್ಕರ ಭಟ್ ಬಗ್ವಾಡಿ ನೇತೃತ್ವದಲ್ಲಿ ನಡೆಯಿತು. ಮಧ್ಯಾಹ್ನ ಅಬಿಜಿತ್ ಲಗ್ನ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಗೌರವಾಧ್ಯಕ್ಷರಾದ ಸುರೇಶ್ ಆರ್.ಕಾಂಚನ್, ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ, ಗೀತಾನಂದ ಟ್ರಸ್ಟ್ ಪ್ರವರ್ತಕರಾದ ಆನಂದ ಸಿ.ಕುಂದರ್, ಮೊಗವೀರ ಮಹಾಜನ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಎಂ.ನಾಯ್ಕ್, ಮಾಜಿ ಅಧ್ಯಕ್ಷರಾದ ಮಹಾಬಲ ಕುಂದರ್, ಮುಂಬಯಿ ಉದ್ಯಮಿ ಪ್ರದೀಪ ಚಂದನ್, ಕುಂದಾಪುರ ಶಾಖಾ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಮಾಜಿ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀಶಕ್ತಿ ಪದಾಧಿಕಾರಿಗಳು, ಮೊಗವೀರ ಯುವ ಸಂಘಟನೆ ಹೆಮ್ಮಾಡಿ, ಬೈಂದೂರು, ಕುಂದಾಪುರ, ಕೋಟೇಶ್ವರ, ಶಂಕರನಾರಾಯಣ ಘಟಕಗಳ ಅಧ್ಯಕ್ಷರು, ಭಜನಾಮಂಡಳಿ ಸದಸ್ಯರು, ಸ್ಥಳೀಯ ಗಣ್ಯರು, ಗ್ರಾಮಸ್ಥರು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!