spot_img
Sunday, March 29, 2026
spot_img

ಕುಂದಾಪುರದ ಸೈಂಟ್ ಮೇರಿಸ್ ಪ. ಪೂ. ಕಾಲೇಜಿನಲ್ಲಿ JEE, NEET, CET ವಿಶೇಷ ತರಭೇತಿಗೆ ದಾಖಲಾತಿ ಆರಂಭ

ಕುಂದಾಪುರ: ಸಂತ ಮೇರಿಸ್ ಪ.ಪೂ. ಕಾಲೇಜಿನಲ್ಲಿಯೇ ಅನುಭವಿ ಉಪನ್ಯಾಸಕರುಗಳಿಂದ JEE, NEET, CET ವಿಶೇಷ ತರಭೇತಿಯನ್ನು ನೀಡಲಾಗುತ್ತಿದೆ. ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ಕುಂದಾಪುರದ ಹೃದಯ ಭಾಗದಲ್ಲಿ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಭವ್ಯ ಕಟ್ಟಡದೊಂದಿಗೆ ಕಂಗೊಳಿಸಿ ಆಸುಪಾಸಿನ, ದೂರದ ಊರಿನ ವಿದ್ಯಾರ್ಥಿಗಳ ಜೀವನದಲ್ಲಿ ವಿದ್ಯೆಯ ತಾಣವಾಗಿ ಜ್ಞಾನದ ಬೆಳಕಾಗಿ ಶೈಕ್ಷಣಿಕ, ಸಾಂಸ್ಕೃತಿಕ ಪ್ರಗತಿಯನ್ನು ಮಾಡುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯತ್ತ ಕೊಂಡೊಯ್ಯಲು ಶ್ರಮಿಸುತ್ತಾ ಪ್ರಸ್ತುತ 20 ವರುಷ ದಾಟಿದ ಸಂತಸದ ಹೆಮ್ಮೆ ಈ ವಿದ್ಯಾ ಸಂಸ್ಥೆಯಾಗಿದೆ.

ಸಂಸ್ಥೆಯು ಉತ್ತಮ ಫಲಿತಾಂಶದೊಂದಿಗೆ ಬಡವ ಬಲ್ಲಿದರೆನ್ನದೆ ಎಲ್ಲಾ ಜಾತಿ ಬಾಂಧವರಿಗೆ ಏಕರೂಪದ ಶಿಕ್ಷಣ ನೀಡುತ್ತಾ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ, ಬಡತನದಲ್ಲಿರುವ ವಿದ್ಯಾರ್ಥಿಗಳಿಗೆ ರಿಯಾಯಿತಿ, ಕಂತಿನ ರೂಪದಲ್ಲಿ ಶುಲ್ಕ ಕಟ್ಟುವಲ್ಲಿ ಅನುಕೂಲತೆ ಹೀಗೆ ಹತ್ತು ಹಲವು ಸೌಲಭ್ಯಗಳನ್ನು ನೀಡಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ದಾರಿ ಮಾಡಿ ಕೊಟ್ಟಿದೆ.

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಬೋಧನೆಯೊಂದಿಗೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯನ್ನು ಮನಗೊಂಡು ಈ ಸಂಸ್ಥೆಯಲ್ಲಿ ಕಲಿಯುವ ಪ್ರಥಮ ಹಾಗೂ ದ್ವಿತೀಯ ಪಿ ಯು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ JEE, NEET, CET ಅನುಭವಿ ಉಪನ್ಯಾಸಕರುಗಳಿಂದ ಕೈಗೆಟಕುವ ಶುಲ್ಕದಲ್ಲಿ ವಿಶೇಷ ತರಭೇತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಇಲ್ಲಿ ಪಿ.ಯು ಶಿಕ್ಷಣಕ್ಕೆ ದಾಖಲಾಗಿ ಈ ಸೌಲಭ್ಯ ಪಡೆಯುವಂತೆ ಸಂಸ್ಥೆಯ ಜಂಟಿ ಕಾರ್ಯದರ್ಶಿ ಅ|ವಂ|ಧರ್ಮಗುರು ಸ್ಟ್ಯಾನಿ ತಾವ್ರೊ ಮತ್ತು ಸಂತ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9483060450, 9606405335 ಸಂಪರ್ಕಿಸಬಹುದಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!