spot_img
Sunday, March 29, 2026
spot_img

ತೆಕ್ಕಟ್ಟೆ ವಿಶ್ವ ವಿನಾಯಕದಲ್ಲಿ ಗ್ರಾಜ್ಯುಯೇಶನ್ ಡೇ

ತೆಕ್ಕಟ್ಟೆ, ಏ. – 19: ವಿಶ್ವ ವಿನಾಯಕ ಸಿ.ಬಿ.ಎಸ್‌ಇ ಸ್ಕೂಲ್ ತೆಕ್ಕಟ್ಟೆ ಇಲ್ಲಿನ ಯು.ಕೆ.ಜಿ. ಮಕ್ಕಳ ಗ್ರಾಜ್ಯುಯೇಶನ್ ಡೇ
ಹಾಗೂ ಬಹುಮಾನ ವಿತರಣಾ ಕಾರ್‍ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಚರಿಷ್ಮಾ ಶೆಟ್ಟಿಯವರು ಯುಕೆಜಿ ವಿದ್ಯಾರ್ಥಿಗಳಿಗೆ ಪ್ರಿ – ಸ್ಕೂಲ್ ಪದವಿ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಮಕ್ಕಳ ಪ್ರಾರಂಭಿಕ ಬೆಳವಣಿಗೆ ಹಾಗೂ ಕಲಿಕೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ತಾವು ಸನ್ನಡತೆ ಹಾಗೂ ಸಂಸ್ಕಾರಯುತ ಗುಣಗಳನ್ನು ಸ್ವಯಂ ಪಾಲನೆ ಮಾಡಿ ಮಾದರಿಯಾದರೆ ಮಾತ್ರ ಮಕ್ಕಳಲ್ಲಿ ಉತ್ತಮ ಗುಣ ನಡತೆಗಳನ್ನು ಅಪೇಕ್ಷಿಸಬಹುದಾಗಿದೆ ಎಂದು ತಿಳಿಸಿದರು. ಮಕ್ಕಳ ಸೂಕ್ಷ್ಮ ಮನಸ್ಸಿನ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡುವುದು ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾರ್‍ಯಕ್ರಮದಲ್ಲಿ ಶಾಲಾ ಮೇನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಾಲೆ ಹಾಗೂ ಪೋಷಕರ ಸಮಾನ ಪಾತ್ರ ಇದೆ ಎಂದು ತಿಳಿಸಿದರು.

ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾರವರು ಮಾತನಾಡಿ ವಿದ್ಯಾರ್ಥಿಗಳಿಗೆ ಚಿಕ್ಕಂದಿನಿಂದಲೇ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿ ಪರಸ್ಪರ ಪ್ರೀತಿ ವಿಶ್ವಾಸ ಗಳಿಸಲು ಶಾಲೆ ಹಾಗೂ ಮನೆಯ ವಾತಾವರಣ ಸಹಕಾರಿಯಾಗಬೇಕು ಎಂದು ತಿಳಿಸಿದರು.

ಕಾರ್‍ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶ್ರೀಮತಿ ವೀಣಾ ಶೆಟ್ಟಿ ಸ್ವಾಗತಿಸಿದರು, ಶ್ರೀಮತಿ ಶಿಲ್ಪ ಶೆಟ್ಟಿ ವಂದಿಸಿದರು ಹಾಗೂ ಶ್ರೀಮತಿ ದೀಕ್ಷಾ ಕೋಟ್ಯಾನ್ ಕಾರ್‍ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!