spot_img
Wednesday, January 22, 2025
spot_img

ಗ್ರಾಹಕರ ಸೇವೆಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿದೆ – ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್ ) ತನ್ನ 110 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು , ಗ್ರಾಹಕರಿಗೆ ಉತ್ಕೃಷ್ಟ ಸೇವೆಯನ್ನು ನೀಡುತ್ತಿದೆ. ಗ್ರಾಹಕರ  ಅನುಕೂಲಕ್ಕಾಗಿ ವಿವಿಧ ರೀತಿಯ  ಸಾಲ ಸೌಲಭ್ಯ  , ಆಕರ್ಷಕ ಬಡ್ಡಿದರದ ಠೇವಣಿ ,  ಲಾಕರ್ ಸೌಲಭ್ಯ , ಕೋರ್ ಬ್ಯಾಂಕಿಂಗ್ ಸೌಲಭ್ಯ ಇವೆಲ್ಲವೂ ಎಸ್ ಸಿಡಿಸಿಸಿ  ಬ್ಯಾಂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳ  ಎಲ್ಲಾ ಶಾಖೆಗಳಲ್ಲಿ ಗ್ರಾಹಕರಿಗೆ ದೊರೆಯುತ್ತಿದೆ. ಹಾಗಾಗಿ ರಾಷ್ಟ್ರೀಕೃತ ಬ್ಯಾಂಕ್ ಗಳಿಗಿಂತ ನಮ್ಮ ಎಸ್ ಸಿಡಿಸಿಸಿ ಬ್ಯಾಂಕ್ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಬ್ಯಾಂಕಿನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ  ಡಾ. ಎಂ ಎನ್ ರಾಜೇಂದ್ರ ಕುಮಾರ್  ಹೇಳಿದ್ದಾರೆ.
ಶನಿವಾರ ಬ್ಯಾಂಕಿನ ಸಿಬ್ಬಂದಿಗಳಿಗೆ ಏರ್ಪಡಿಸಿದ ಗಿಫ್ಟ್ ಕೂಪನ್ ವಿತರಣಾ ಸಮಾರಂಭದಲ್ಲಿ ಅವರು  ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿ ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಬೇಕು . ಬ್ಯಾಂಕಿನ ವಿವಿಧ ಯೋಜನೆಗಳ ಸಮರ್ಪಕ ಮಾಹಿತಿಯನ್ನು ಗ್ರಾಹಕರಿಗೆ ನೀಡಬೇಕು. ಇದರಿಂದ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ಉತ್ತಮ ಬಾಂಧವ್ಯ ಬೆಳೆಯುತ್ತದೆ. ಇದು ಬ್ಯಾಂಕಿನ ಪ್ರಗತಿಗೆ ಪೂರಕವಾಗುತ್ತದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.
ಬ್ಯಾಂಕಿನ 850  ಸಿಬ್ಬಂದಿಗಳ ಪರವಾಗಿ ಮುಖ್ಯಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ಹಾಗೂ ಆಡಳಿತ ವಿಭಾಗದ ಅಧಿಕಾರಿ ಸಹನಾ ಬಿ .ಶೆಟ್ಟಿ ಅಧ್ಯಕ್ಷರಾದ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರಿಂದ ರೂ. 10,000/- ಮೌಲ್ಯದ  ಗಿಫ್ಟ್ ಕೂಪನ್ ಸ್ವೀಕರಿಸಿದರು.
ಬ್ಯಾಂಕಿನ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಮಾತನಾಡಿ , ಬ್ಯಾಂಕ್ ವರದಿ ವರ್ಷದಲ್ಲಿ ಗಣನೀಯ ಪ್ರಗತಿಯನ್ನು ಕಂಡಿದೆ. ಬ್ಯಾಂಕ್ ಈ ರೀತಿಯ ಪ್ರಗತಿಯನ್ನು ಕಾಣಲು ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ದಕ್ಷ ನಾಯಕತ್ವ ಕಾರಣವಾಗಿದೆ. ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು  ಹಾಗೂ ಸಿಬ್ಬಂದಿ ವರ್ಗದ ಪರಿಶ್ರಮ ಕೂಡ ಅಭಿವೃದ್ಧಿಗೆ ಪೂರಕವಾಗಿದೆ  ಎಂದರು.
ಬ್ಯಾಂಕಿನ ಸಿಬ್ಬಂದಿಗಳ ಪರವಾಗಿ ಉಪ ಮಹಾಪ್ರಬಂಧಕಿ ಶರ್ಮಿಳಾ ಭಟ್ , ಅಧಿಕಾರಿಗಳಾದ  ರಾಜೇಶ್ ಶೆಟ್ಟಿ , ವಿಶ್ವನಾಥ್ ಶೆಟ್ಟಿ ಮಾತನಾಡಿ ಬ್ಯಾಂಕಿನ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ  ವಿನಯಕುಮಾರ್ ಸೂರಿಂಜೆ , ನಿರ್ದೇಶಕರುಗಳಾದ  ಟಿ.ಜಿ.ರಾಜರಾಮ ಭಟ್,  ಭಾಸ್ಕರ್ ಎಸ್ ಕೋಟ್ಯಾನ್ , ವಾದಿರಾಜ ಶೆಟ್ಟಿ ಎಂ , ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು , ಶಶಿಕುಮಾರ್ ರೈ ಬಾಲ್ಯೋಟ್ಟು ,  ಎಸ್. ಬಿ.ಜಯರಾಮ್ ರೈ ,  ಎಸ್. ರಾಜು ಪೂಜಾರಿ,  ಅಶೋಕ್ ಕುಮಾರ್ ಶೆಟ್ಟಿ ,  ಮೋನಪ್ಪ ಶೆಟ್ಟಿ ಎಕ್ಕಾರು  ,  ಹರಿಶ್ಚಂದ್ರ ,  ಕೆ.ಜೈರಾಜ್  ಬಿ.ರೈ ,  ಸದಾಶಿವ ಉಳ್ಳಾಲ್ ,  ಮುಖ್ಯ ಕಾರ್ಯನಿರ್ವಹಣಾಧಿಕಾರಿ  ರವೀಂದ್ರ ಬಿ.  ಉಪಸ್ಥಿತರಿದ್ದರು. 
ಬ್ಯಾಂಕಿನ ನಿರ್ದೇಶಕರಾದ ಟಿ.ಜಿ.ರಾಜರಾಮ ಭಟ್ ಸ್ವಾಗತಿಸಿದರು. ಸಿಇಓ ರವೀಂದ್ರ ಬಿ ವಂದಿಸಿದರು. 

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!