spot_img
Friday, May 8, 2026
spot_img

ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಿತ್ಯ ಅನ್ನಸಂತರ್ಪಣೆಗೆ ಚಾಲನೆ

ಕುಂದಾಪುರ, ಮೇ.1: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಪುಷ್ಪ ಪವಾಡ ಖ್ಯಾತಿಯ ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ನಿತ್ಯ ಮಧ್ಯಾಹ್ನ ಅನ್ನಸಂತರ್ಪಣೆಗೆ ಮೇ.1ರಂದು ಚಾಲನೆ ನೀಡಲಾಯಿತು.

ಧಾರ್ಮಿಕ ಮುಂದಾಳು, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ಬಿ.ಅಪ್ಪಣ್ಣ ಹೆಗ್ಡೆ ಅವರು ನಿತ್ಯ ಅನ್ನಸಂತರ್ಪಣೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು.

ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ, ದೇವಳದ ಪ್ರಧಾನ ಅರ್ಚಕರು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅನಂತ ಅಡಿಗ, ಸಮಿತಿ ಸದಸ್ಯರಾದ ಕೆ.ಸುಬ್ಬಣ್ಣ ಶೆಟ್ಟಿ ಕೆಂಚನೂರು, ಜಯರಾಮ ಶೆಟ್ಟಿ ಹಡಾಳಿ ಅಂಪಾರು, ಉಮೇಶ ಮೊಗವೀರ ಕಂಡ್ಲೂರು, ಜಿ.ಶೇಖರ ಪೂಜಾರಿ ಗುಲ್ವಾಡಿ, ಕುಪ್ಪ ಉದಯನಗರ ಗುಲ್ವಾಡಿ, ರೀತಾ ದೇವಾಡಿಗ ಸೌಕೂರು, ಆಶಾ ಸಂತೋಷ್ ಪೂಜಾರಿ ಮುಕ್ಕೋಡು ನೇರಳಕಟ್ಟೆ, ದೇವಳದ ಅರ್ಚಕವೃಂದದವರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇನ್ನು ಪ್ರತಿನಿತ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ಇರುತ್ತದೆ. ಮಧ್ಯಾಹ್ನ ಮಹಾಮಂಗಳಾರತಿ ಮುಗಿದ ತಕ್ಷಣ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!