Sunday, September 8, 2024

ಗುಜ್ಜಾಡಿಯಲ್ಲಿ ಸಮುದಾಯ ಭವನ ಉದ್ಘಾಟನೆ

ಕುಂದಾಪುರ : ನಿವೇಶನರಹಿತರಿಗೆ ನಿವೇಶನ ನೀಡುವ ಉದ್ದೇಶದಿಂದ ಸರಕಾರದ ೯೪ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ನಿವೇಶನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಯೋಜನೆ ಕಾರ್ಯಗತವಾಗುತ್ತಿದ್ದು, ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಇಲ್ಲದ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕ್ರಮಕೈಗೊಳ್ಳಲಾಗಿದೆ. ಚುನಾವಣೆ ಸಂದರ್ಭ ನೀಡಿದ ಆಶ್ವಾಸನೆಗಳನ್ನು ಬಹುತೇಕ ಈಡೇರಿಸಲಾಗಿದ್ದು, ಗುಜ್ಜಾಡಿ ಗ್ರಾಮ ಪಂಚಾಯತ್‌ಗೂ ಕೂಡ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್‌ನಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ೨೦ ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಮುದಾಯ ಭವನವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಗುಜ್ಜಾಡಿ ಗ್ರಾ.ಪಂ ಅಧ್ಯಕ್ಷೆ ಯಮುನಾ ಪೂಜಾರಿ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಾಜು ಎನ್. ಪೂಜಾರಿ, ಸದಸ್ಯರಾದ ಶೇಖರ ದೇವಾಡಿಗ, ಹರೀಶ್ ಮೇಸ್ತ, ಶ್ರೀಧರ, ಲೋಲಾಕ್ಷಿ ಪಂಡಿತ್, ಜೆಸಿಂತಾ, ತುಂಗಾ ಪೂಜಾರ್‍ತಿ, ಭಾರತಿ, ಇಂಜಿನಿಯರ್ ಪ್ರಶಾಂತ ಕುಮಾರ ಕಾರ್ಯದರ್ಶಿ ಶಕುಂತಲಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪಿಡಿ‌ಒ ಶೋಭಾ ಎಸ್. ಸ್ವಾಗತಿಸಿದರು. ಲೆಕ್ಕ ಸಹಾಯಕ ಶೇಖರ್ ಜಿ. ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!