Sunday, September 8, 2024

ಬೈಂದೂರು: ಸುರಭಿ ಜೈಸಿರಿ ಕಾರ್ಯಕ್ರಮದ ಸಮಾರೋಪ

ಬೈಂದೂರು: ಸಾಂಸ್ಕೃತಿಕ ಚಟುವಟಿಕೆ ನಿರಂತರವಾಗಿ ನಡೆಸುವವರಿಗೆ ನೆರವು ನೀಡಬೇಕಾದ್ದು ಇಲಾಖೆಯ ಕರ್ತವ್ಯವಾಗಿದೆ. ಕಾರ್ಯಕ್ರಮಗಳ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸಿದಲ್ಲಿ ಸರಕಾರದ ಅನುದಾನಗಳನ್ನು ನೀಡಲು ಸಾಧ್ಯವಾಗುತ್ತದೆ ಎಂದು ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದರು.

ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಇಲ್ಲಿನ ಶಾರದಾ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾದ ಸುರಭಿ ಜೈಸಿರಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ ಯಾರು ಕೆಲಸ ಮಾಡುತ್ತಾರೆ, ಯಾರು ಮಾಡುವುದಿಲ್ಲ ಎಂಬುದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೂ ಗಮನಿಸುತ್ತಿರುತ್ತದೆ ಎಂದರು. 

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿ ಮನುಷ್ಯ ಮನುಷ್ಯನಾಗಿ ಉಳಿಯಲು ಕಲೆ ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ನಂಟು ಹೊಂದಿರುವುದು ಬಹುಮುಖ್ಯ. ಬೈಂದೂರಿನ ಜನರಿಗೆ ತಿಳಿದೋ ತಿಳಿಯದೆಯೋ ಅಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡುವ ಕಾರ್ಯವನ್ನು ಸುರಭಿ ಮಾಡುತ್ತಿದೆ ಎಂದರು.

ಖ್ಯಾತ ಚಲನಚಿತ್ರ ನಿರ್ದೇಶಕ ಗುರದತ್ತ ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಚಿತ್ರಕಲಾ ಸ್ವರ್ಧೆಯಲ್ಲಿ ವಿಜೇತರಾದ ಸುರಭಿಯ ವಿದ್ಯಾರ್ಥಿಗಳು ಹಾಗೂ ಸುರಭಿಯ ವಿದ್ಯಾರ್ಥಿ ಪೋಷಕರಿಗೆ ನಡೆಸಿದ ಸ್ವರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ಸೋಮನಾಥನ್ ಆರ್., ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಮಣಿಕಂಠ ದೇವಾಡಿಗ, ರೋಟರಿ ಜಿಲ್ಲಾ ಲಿಟ್ರಸಿ ವೈಸ್ ಚೇರ್‌ಮನ್ ಐ ನಾರಾಯಣ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟ್ ಬೈಂದೂರು ಘಟಕದ ಛೇರ್‌ಮನ್ ನಿತಿನ್ ಕುಮಾರ್ ಶೆಟ್ಟಿ, ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ, ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು. 

ಸುರಭಿ ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೋಷಕ ಪ್ರತಿನಿಧಿಗಳಾದ ನಾಗರತ್ನ ರಾಘವೇಂದ್ರ, ಶೋಭಾ ಬೈಂದೂರು ಬಹುಮಾನ ವಿಜೇತರ ಯಾದಿ ವಾಚಿಸಿದರು. ಪೂರ್ಣಿಮಾ ಸುರಭಿ ಸ್ವಾಗತ ಗೀತೆ ಹಾಡಿದರು. ಸುರಭಿ ಕಾರ್ಯಕಾರಿ ಸಮಿತಿ ಸದಸ್ಯರಾದ ಉದಯ ಗಾಣಿಗ ಸ್ವಾಗತಿಸಿ, ಗಣೇಶ್ ಪೂಜಾರಿ ವಂದಿಸಿದರು. ಪತ್ರಕರ್ತ ಸುನಿಲ್ ಹೆಚ್. ಜಿ. ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!