Sunday, September 8, 2024

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಸೇವೆ  ಅನುಕರಣೀಯ-ಮುರುಗೇಶ್ ನಿರಾಣಿ

ಮಂಗಳೂರು : ಗ್ರಾಹಕರ ಸೇವೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್ )  ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಕರಣೀಯ ಸೇವೆಗೈಯುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸರಿಸಮಾನವಾಗಿ ಬೆಳೆದಿರುವ ಎಸ್ ಸಿಡಿಸಿಸಿ ಬ್ಯಾಂಕ್  ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಅಭೂತಪೂರ್ವ ಸಾಧನೆಗೈದಿದೆ ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ.

ಅವರು ಗುರುವಾರ ಎಸ್ ಸಿಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ ಬ್ಯಾಂಕಿನ ನಿರ್ದೇಶಕರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು .    

ಎಸ್ ಸಿಡಿಸಿಸಿ ಬ್ಯಾಂಕ್  ಉದ್ದಿಮೆದಾರರಿಗೆ ಸಾಲ ಸೌಲಭ್ಯ ನೀಡಿದೆ. ನನ್ನ ನಿರಾಣಿ ಗ್ರೂಪ್ ಗೆ 25 ವರ್ಷಗಳ ಹಿಂದೆ ರಾಜೇಂದ್ರ ಕುಮಾರ್ ಅವರು ಸಾಲವನ್ನು  ನೀಡಿದ್ದು , ಅದರಿಂದ ನನ್ನ ಉದ್ದಿಮೆ ಇಂದು ಯಶಸ್ವಿಯಾಗಿ ಬೆಳೆದು ನಿಂತು ಸಹಸ್ರಾರು  ಮಂದಿ ದುಡಿಯಲು ಅವಕಾಶ ಸಿಕ್ಕಿದೆ. ನನ್ನ ಸಂಸ್ಥೆ ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆಯಲು ರಾಜೇಂದ್ರ ಕುಮಾರ್ ಅವರ ಪ್ರೋತ್ಸಾಹವೇ ಕಾರಣ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸಾಲ ನೀಡಿ ಅವರನ್ನು ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹಿಸುತ್ತಿರುವ ರಾಜೇಂದ್ರ ಕುಮಾರ್ ಕಾರ್ಯ ಶ್ಲಾಘನೀಯ.‌ ಹಾಗಾಗಿ ಅವರು ನಮಗೆಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.

ಬ್ಯಾಂಕಿಗೆ ಭೇಟಿ ನೀಡಿದ ಸಚಿವ ಮುರುಗೇಶ್ ನಿರಾಣಿ ಅವರನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಶಾಲು ಹೊದಿಸಿ , ಬೆಳ್ಳಿಯ ಸ್ಮರಣಿಕೆಯನ್ನು ನೀಡಿ ಸಮ್ಮಾನಿಸಿದರು.

ಬ್ಯಾಂಕಿನ ನಿರ್ದೇಶಕರಾದ ಟಿ.ಜಿ.ರಾಜರಾಮ ಭಟ್ , ಭಾಸ್ಕರ್ ಎಸ್.ಕೋಟ್ಯಾನ್ , ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು , ಶಶಿಕುಮಾರ್ ರೈ ಬಾಲ್ಯೋಟ್ಟು , ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ , ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ.‌ ,  ಮಹಾಪ್ರಬಂಧಕರಾದ ಗೋಪಿನಾಥ್ ಭಟ್   ಹಾಗೂ ಮೇಘರಾಜ್ ಜೈನ್  ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!