spot_img
Monday, March 30, 2026
spot_img

ಬ್ರಹ್ಮೇರಿ ಶ್ರೀ ನರಸಿಂಹ ದೇವಸ್ಥಾನ ಲೋಕಾರ್ಪಣೆ: ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಕುಂದಾಪುರ, ಮೇ.13: ಕುಂದಾಪುರ ತಾಲೂಕು ನೂಜಾಡಿ ಗ್ರಾಮದ ಬ್ರಹ್ಮೇರಿಯ ಪುರಾಣ ಪ್ರಸಿದ್ದ ಶ್ರೀ ನರಸಿಂಹ ದೇವಸ್ಥಾನ ಜೀರ್ಣೋದ್ದಾರಗೊಂಡಿದ್ದು ದೇವಳ ಲೋಕಾರ್ಪಣೆ, ಶ್ರೀ ನರಸಿಂಹ ದೇವರ ನೂತನ ಪಂಚಲೋಹದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಮೇ.12ರಿಂದ ಆರಂಭಗೊಂಡಿತು.

ಮೇ.12 ಗುರುವಾರ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಸಂಜೆ 4 ಗಂಟೆಯಿಂದ ಗೇಹ ಪರಿಗೃಹ, ವಾಸ್ತು ಹೋಮ, ವಾಸ್ತು ಪೂಜೆ, ಬಲಿದಾನ, ಶಯ್ಯಾಕಲ್ಪನ, ಬಿಂಬಶುದ್ಧಿ, ಕಲಶಾಭಿಷೇಕ, ಶಯ್ಯಾನ್ಯಾಸ ಅಧಿವಾಸಾಧಿ ಪೂಜೆಗಳು, ಆಧಿವಾಸಾಧಿ ಹೋಮಗಳು ನಡೆದವು. ಮೇ.13ರಂದು ಬೆಳಿಗ್ಗೆ 8 ಗಂಟೆಯಿಂದ ನಾಂದಿ ಸಮಾರಾಧನೆ, ಮಿಥುನ ಲಗ್ನ ಸುಮೂರ್ತದಲ್ಲಿ ಬಿಂಬ ಪ್ರತಿಷ್ಠೆ, ಜೀವಕುಂಭ ಸೇಚನ, ನ್ಯಾಸಾಧಿಗಳು, ತತ್ವಹೋಮ, ಶಾಂತಿಹೋಮ, ಪ್ರಾಯಶ್ಚಿತ್ಥ ಹೋಮ, ಕಲಶಾಭೀಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಭಜನಾ ಕಾರ್ಯಕ್ರಮ, ಸಂಜೆ ಅಷ್ಟೋತ್ತರ ಶತ ಪರಿಕಲಶ ಸಹಿತ ಬ್ರಹ್ಮಕುಂಭ ಸ್ಥಾಪನೆ, ಅಧಿವಾಸ ಹೋಮ, ಅಷ್ಟಾವಧಾನ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ಲಕ್ಷ್ಮೀನಾರಾಯಣ ಭಟ್, ಆಡಳಿತಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಅರ್ಚಕರು, ಗ್ರಾಮ ಪಂಚಾಯತಿ ಸದಸ್ಯರು, ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

ಮೇ.14 ಬೆಳಿಗ್ಗೆ 8ರಿಂದ ಶ್ರೀ ನರಸಿಂಹ ಹೋಮ, ಕಲಶಾಭಿಷೇಕ, ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ, ಮಧ್ಯಾಹ್ನ 12 ಗಂಟೆಯಿಂದ ಧಾರ್ಮಿಕ ಸಭೆ, 12-30ರಿಂದ ಮಹಾ ಅನ್ನಸಂತರ್ಪಣೆ, ಮಧ್ಯಾಹ್ನ 2 ಗಂಟೆಯಿಂದ ಸ್ಥಳೀಯ ಕಲಾವಿದರಿಂದ ಹೋಳಿ ಕುಣಿತ, ನಂತರ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಕಲಾವಿದರಿಂದ ಯಕ್ಷಗಾನ ರಾಮಾಶ್ವಮೇಧ ನಡೆಯಲಿದೆ. ಸಂಜೆ ರಂಗ ಪೂಜೆ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!