spot_img
Monday, March 30, 2026
spot_img

ಮೂಕಾಂಬಿಕೆಯ ದರ್ಶನದಿಂದ ಮನಸ್ಸಿಗೆ ಸಂತೋಷವಾಗಿದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇವರ ವಿಶೇಷ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

ಕೊಲ್ಲೂರು ದೇವಸ್ಥಾನದ ಪರವಾಗಿ ಪೂರ್ಣಕುಂಭ ಸ್ವಾಗತದೊಂದಿಗೆ ಕೇಂದ್ರ ಸಚಿವರನ್ನು ಬರಮಾಡಿಕೊಳ್ಳಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತಿಸಿದರು. ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಮಾಡಿದರು. ದೇವಸ್ಥಾನದ ಯಜ್ಞಶಾಲೆಯಲ್ಲಿ ಚಂಡಿಕಾ ಹೋಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರ ಜೊತೆ ಸಮಾಲೋಚನೆ ಮಾತುಕತೆ ಮಾಡಿದ ನಿರ್ಮಲಾ ಸೀತಾರಾಮನ್, ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ, ಚಂಡಿಕಾಹೋಮದ ಸೇವೆಯಿಂದ ಮನಸ್ಸಿಗೆ ಖುಷಿಯಾಗಿದೆ ಎಂದು ಹೇಳಿದರು. ಮುಂದೆ ಮತ್ತೆ ಕ್ಷೇತ್ರಕ್ಕೆ ಭೇಟಿಕೊಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಮ್ ಸುಕುಮಾರ್ ಶೆಟ್ಟಿ, ಬೈಂದೂರು ತಹಶೀಲ್ದಾರ್ ಎಚ್.ಎಸ್. ಶೋಭಾಲಕ್ಷ್ಮಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ, ಸಮಿತಿಯ ಸದಸ್ಯರಾದ ಸಂಧ್ಯಾ ರಮೇಶ್, ರತ್ನ ರಮೇಶ್ ಕುಂದರ್, ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಭಟ್ ಮತ್ತು ಬೈಂದೂರು ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗ ಮತ್ತು ಗೋವಿಂದ ಅಡಿಗ ನೇತೃತ್ವದಲ್ಲಿ ಪೂಜಾ ಕಾರ್ಯ ನಡೆದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!