spot_img
Monday, March 30, 2026
spot_img

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ ಸ್ಥಾನ ಪಡೆದ ಸಿದ್ದಾಪುರ ಸರ್ಕಾರಿ ಪ್ರೌಢಶಾಲೆ

ಕುಂದಾಪುರ: 2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕು ಸಿದ್ಧಾಪುರದ ಸರ್ಕಾರಿ ಪ್ರೌಢಶಾಲೆ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿದೆ.

ಈ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ಶೆಟ್ಟಿ 625ರಲ್ಲಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ರಿತಿಕಾ ಶೆಟ್ಟಿ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

625 ಅಂಕ ಗಳಿಸಿರುವ ವೈಷ್ಣವಿ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟವನ್ನು ಪ್ರತಿನಿಧಿಸಿದ್ದರು. ಇವರು ವಸಂತ ಶೆಟ್ಟಿ-ಸುಷ್ಮಾ ಸಿದ್ಧಾಪುರ ಇವರ ಪುತ್ರಿ.

624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವ ರಿತಿಕಾ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಶಂಕರ ಶೆಟ್ಟಿ ಮತ್ತು ನಾಗರತ್ನ ಬಾಳೆಜೆಡ್ಡು ಹೊಸಂಗಡಿ ಇವರ ಪುತ್ರಿ.

ಈ ಇಬ್ಬರು ವಿದ್ಯಾರ್ಥಿನಿಯರು ಗ್ರಾಮೀಣ ಪ್ರದೇಶದ ಪ್ರತಿಭೆಗಳು. ಇವರ ಸಾಧನೆಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಸಿದ್ಧಾಪುರ ಪ್ರೌಢಶಾಲೆ ಪ್ರತೀ ವರ್ಷವೂ ಉತ್ತಮ ಫಲಿತಾಂಶ ನೀಡುತ್ತಿದ್ದು ಗುಣಮಟ್ಟದ ಶಿಕ್ಷಣಕ್ಕೆ ಹೆಸರು ಪಡೆದಿದೆ. ಈ ಬಾರಿ ರಾಜ್ಯಕ್ಕೆ ಪ್ರಥಮ, ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ಗಮನ ಸಳೆದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!