spot_img
Monday, March 30, 2026
spot_img

ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಪುಣ್ಯ ಸ್ಮರಣೆ

ಕುಂದಾಪುರ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯರ 31ನೇ ಪುಣ್ಯಸ್ಮರಣೆ ಸಭೆಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೆರವೇರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರು ಮಾತನಾಡುತ್ತಾ ರಾಜೀವ್ ಗಾಂಧಿಯ ಆಡಳಿತ ಅವಧಿಯಲ್ಲಿ ಸಂವಿಧಾನದ 73ನೇ ವಿಧಿಯನ್ನು ತಿದ್ದುಪಡಿಯನ್ನು ತಂದು ಪಂಚಾಯತ್ ರಾಜ್ ವ್ಯವಸ್ಥೆಯ ಆಡಳಿತದಲ್ಲಿ ಸಮಾಜದ ಎಲ್ಲ ವರ್ಗದ ಜನರಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನವನ್ನು ಪಡೆಯುವಂತಾಯಿತು ಎಂದರು.

ಆನಗಳ್ಳಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಂಗಾಧರ್ ಶೆಟ್ಟಿಯವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಮಾಜಿ ಪುರಸಭಾ ಸದಸ್ಯ ಸುಭಾಷ್ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇವತಿ ಶೆಟ್ಟಿ,ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರಿಗಾರ್, ಜೋಸೆಫ್ ರೆಬೆಲ್ಲೋ, ಸಚಿನ್ ಕುಮಾರ್, ದಿನೇಶ್ ಬೆಟ್ಟ ಇತರರು ಉಪಸ್ಥಿತರಿದ್ದರು

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ತಾ ಸ್ವಾಗತಿಸಿ,ಜಿಲ್ಲಾ ಯುವಪ್ರಧಾನ ಕಾರ್ಯದರ್ಶಿ ಅಭಿಜಿತ್ ಪೂಜಾರಿ ನಿರೂಪಿಸಿ, ಮಾಜಿ ನಾಮನಿರ್ದೇಶಿತ ಪುರಸಭಾ ಸದಸ್ಯರಾದ ಕೇಶವ ಭಟ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!