spot_img
Monday, March 30, 2026
spot_img

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ಗೆ ಕೆ.ವಿ.ಆರ್.ಟ್ಯಾಗೋರ್ ಪ್ರಶಸ್ತಿ ಪ್ರದಾನ

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ)ದ ಕಾಸರಗೋಡು ಘಟಕ ವಿವಿಧ ದತ್ತಿನಿಧಿ ಪ್ರಶಸ್ತಿಗೆ ಏಳು ಮಂದಿ ಪತ್ರಕರ್ತರನ್ನು ಆಯ್ಕೆ ಮಾಡಿದ್ದು, ಕ್ರೀಡಾ ಅಂಕಣಕಾರರಾಗಿ ಪ್ರಸಿದ್ಧಿಯಾಗಿರುವ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಕೆ.ವಿ. ಆರ್. ಟ್ಯಾಗೋರ್ ದತ್ತಿನಿಧಿ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರದಾನ ಮಾಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುಂಬಳೆ ಸಮೀಪದ ನಾರಾಯಣ ಮಂಗಲ ಎ.ಎಲ್.ಪಿ.ಶಾಲೆಯ ಎಂ.ವಿ. ಬಳ್ಳುಳ್ಳಾಯ ವೇದಿಕೆಯಲ್ಲಿ ದತ್ತಿನಿಧಿ ಪ್ರಶಸ್ತಿ ಸಮಾರಂಭ ಭಾನುವಾರ ನಡೆಯಿತು.

ನಿವೃತ್ತ ಐಪಿ‌ಎಸ್ ಅಧಿಕಾರಿ, ಕರ್ನಾಟಕ ವಾರ್ತಾ ಇಲಾಖೆಯ ಆಯುಕ್ತರಾಗಿದ್ದ ಕೆ. ವಿ. ಆರ್. ಟ್ಯಾಗೋರ್ ಸ್ಮರಣಾರ್ಥ ಅವರ ಮಿತ್ರರಾದ ಟಿ.ತಿಮ್ಮೇಗೌಡ ಹಾಗೂ ವೆಂಕಟೇಶ್ ತುಪ್ಪಿಲ್ ನೀಡಿದ ಈ ದತ್ತಿನಿಧಿ ಪ್ರಶಸ್ತಿಯೂ ರೂ.25,000 ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಇದನ್ನು ಎಸ್. ಜಗದೀಶ್ಚಂದ್ರ ಅಂಚನ್ ಗೆ ನೀಡಿ ಪುರಸ್ಕರಿಸಲಾಯಿತು. ಸುಮಾರು 30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ಗುರುತಿಸಿಕೊಂಡಿರುವ ಜಗದೀಶ್ಚಂದ್ರ ಅಂಚನ್ ಇದುವರೆಗೆ ಸುಮಾರು 4500ಕ್ಕೂ ಹೆಚ್ಚು ಕ್ರೀಡಾ ಲೇಖನ,ಅಂಕಣ ಬರಹಗಳನ್ನು ಬರೆದಿದ್ದು, ಇದು ರಾಜ್ಯ, ಅಂತರ್ ರಾಜ್ಯ ಮಟ್ಟದ ವಿವಿಧ ದಿನ ಪತ್ರಿಕೆಗಳಲ್ಲಿ, ವಾರಪತ್ರಿಕೆಗಳಲ್ಲಿ ಹಾಗೂ ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಇವರ ಚೊಚ್ಚಲ ಕೃತಿ ವಿಶ್ವಕಪ್ ಕ್ರಿಕೆಟ್ ಸಮರ ಪ್ರಕಟಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಪಾಣಕ್ಕಾಡ್ ಸಯ್ಯದ್ ಮುನನ್ವರಲಿ ಶಿಹಾಬ್ ತಂಙಳ್, ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಮಂಜೇಶ್ವರ ಶಾಸಕರಾದ ಎ.ಕೆ.ಎಂ.ಅಶ್ರಫ್, ಹಿರಿಯ ಮಾಧ್ಯಮ ತಜ್ಞ ಈಶ್ವರ ದೈತೋಟ, ಕುಂಬಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಸರ್ ಮೊಗ್ರಾಲ್, ಪತ್ರಕರ್ತರ ಸಂಘ ಕಾಸರಗೋಡು ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ದಕ್ಷಿಣ ಕನ್ನಡ ಘಟಕದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದವರು ಉಪಸ್ಥಿತರಿದ್ದರು.

ಇವರ ಕ್ರೀಡಾ ಬರವಣಿಗೆಗಾಗಿ ೨೦೧೩ರಲ್ಲಿ ಮೀಡಿಯಾ ಅವಾರ್ಡ್’, 2014ರಲ್ಲಿ ಸಮಾಜ ರತ್ನ’ ರಾಜ್ಯ ಪ್ರಶಸ್ತಿ, 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ; ಜಾನಪದ ಕ್ರೀಡೆಗಳ ಬಗ್ಗೆ ಇವರು ಬರೆದ ಕ್ರೀಡಾ ಲೇಖನಗಳಿಗಾಗಿ 2019ರ ಜಾನಪದ ಲೋಕ ರಾಜ್ಯ ಪ್ರಶಸ್ತಿ , 2020ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಕೆ.ಎ.ನೆಟ್ಟಕಲ್ಲಪ್ಪ ರಾಜ್ಯ ಪ್ರಶಸ್ತಿ, 2021ರಲ್ಲಿ ಸಿದ್ಧಗಂಗಾ ಶ್ರೀ ರಾಜ್ಯ ಪ್ರಶಸ್ತಿ, ಅಲ್ಲದೆ ನಮ್ಮ ಕುಡ್ಲ ಸಾಧಕ ಪ್ರಶಸ್ತಿ, ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಹಾಗೂ ಸನ್ಮಾನ ಪುರಸ್ಕಾರವನ್ನು ಇವರು ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!