spot_img
Monday, March 30, 2026
spot_img

ಮರವಂತೆ ಪ್ರಕಾಶ ಪಡಿಯಾರ್‌ಗೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ

 

ಬೈಂದೂರು: ಮಂಗಳೂರಿನ ಕಥಾಬಿಂದು ಪ್ರಕಾಶನ ಇದೇ 18 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಿದ್ದ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಮರವಂತೆ ಪ್ರಕಾಶ ಪಡಿಯಾರ್ ಅವರಿಗೆ ಶ್ರೀ ಕೃಷ್ಣಾನುಗ್ರಹ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀ ಪಾದಂಗಳವರು ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಪ್ರಯೋಗಶೀಲ ಕೃಷಿಕ ಡಾ. ತಡಂಬೈಲು ಕೃಷ್ಣಪ್ಪ ಗೌಡ, ಉಡುಪಿ ತಾಲ್ಲೂಕು ಕಸಾಪ ಕಾರ್ಯದರ್ಶಿ ಜನಾರ್ದನ ಕೊಡವೂರು, ಕಾರ್ಯಕ್ರಮದ ಆಯೋಜಕ, ಕಥಾಬಿಂದು ಪ್ರಕಾಶನದ ಪಿ. ವಿ. ಪ್ರದೀಪ್‌ಕುಮಾರ್ ಉಪಸ್ಥಿತರಿದ್ದರು.

ಮರವಂತೆ ಪ್ರಕಾಶ ಪಡಿಯಾರ್ ಇಲ್ಲಿನ ಸೇವಾ ಸಾಂಸ್ಕೃತಿಕ ವೇದಿಕೆ ಸಾಧನಾದ ನಿಡುಗಾಲದ ಸದಸ್ಯರು. ೪೦ ವರ್ಷಗಳಿಂದ ವಿವಿಧ ಸಮಾಜಪರ ಚಟುವಟಿಕೆಗಳಲ್ಲಿ, ಸಾಹಿತ್ಯ ಪರಿಚಾರಿಕೆಯಲ್ಲಿ ತೊಡಗಿಕೊಂಡಿರುವುದಲ್ಲದೆ, ಕವಿಗಳಾಗಿಯೂ ಗಮನ ಸೆಳೆದಿರುವರು. ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!