spot_img
Wednesday, January 22, 2025
spot_img

ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯು ಪೀಡಿತರ ಆರೋಗ್ಯ ವಿಚಾರಿಸಿದ ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ

ಕುಂದಾಪುರ: ಜಡ್ಕಲ್ ಮುದೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ಡೆಂಗ್ಯುವಿನಿಂದಾಗಿ 84 ಮಂದಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚೇತರಿಸಿಕೊಂಡಿದ್ದು ಈಗ 39 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡೆಂಗ್ಯು ನಿಯಂತ್ರಣಕ್ಕೆ ಬರುತ್ತಿದೆ ಎಂದು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

ಅವರು ಮೇ.30ರಂದು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯುವಿನಿಂದ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಆಸ್ಪತ್ರೆಯಲ್ಲಿ ನೀರಿನ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಯವಾಗಿದ್ದು ಕೂಡಲೇ ಸರಿಪಡಿಸಲು ತಿಳಿಸಿದ್ದೇನೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಡೆಂಗ್ಯುವಿನಿಂದ ಬಳಲುತ್ತಿರುವ ಆರೋಗ್ಯವನ್ನು ನಿರಂತವಾಗಿ ವಿಚಾರಿಸಲಾಗುತ್ತಿದೆ ಎಂದರು.

ರೋಗಿಗಳಿಗೆ ಉತ್ತಮ ಸೇವೆ ನೀಡುವಂತೆ ವೈದ್ಯರುಗಳಿಗೆ ಸೂಚಿಸಿದ ಶಾಸಕರು, ಇದು ಸರ್ಕಾರಿ ಆಸ್ಪತ್ರೆ, ರೋಗಿಗಳಿಗೆ ಚಿಕಿತ್ಸೆ ಇಲ್ಲ ಎನ್ನಬಾರದು, ರೋಗಿಯ ಪರಿಸ್ಥಿತಿ ಗಂಭೀರವಾಗಿರುವ ಪಕ್ಷದಲ್ಲಿ ಅಥವಾ ಇಲ್ಲಿ ನಿರ್ದಿಷ್ಟ ಚಿಕಿತ್ಸೆ ಇಲ್ಲದಿದ್ದರೆ ಜಿಲ್ಲಾ ಆಸ್ಪತ್ರೆಗಳಿಗೆ ಕಳಿಸಬಹುದು. ಇಲ್ಲಿ ಚಿಕಿತ್ಸಾ ವ್ಯವಸ್ಥೆ ಇದ್ದು ಬೇರೆ ಕಡೆ ಕಳಿಸಬೇಡಿ ಎಂದು ವೈದ್ಯರುಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಡ್ಕಲ್ ಗ್ರಾ.ಪಂ.ಅಧ್ಯಕ್ಷೆ ಜಲಜಾಕ್ಷಿ ಶೆಟ್ಟಿ, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೋ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!