spot_img
Monday, March 23, 2026
spot_img

ಆರೋಪಿ ಅಜೀಜ್ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು-ಶರಣ್ ಪಂಪ್‌ವೆಲ್

ಕುಂದಾಪುರ: ಆರೋಪಿ ಅಜೀಜ್‌ನ ಬಂಧನವಾದರಷ್ಟೇ ಸಾಲದು, ಆತನ ಪತ್ನಿ ಸಲ್ಮಾಳ ಬಂಧನವಾಗಬೇಕು, ಈ ಬಗ್ಗೆ ಉನ್ನತ ತನಿಖೆಯಾಗಬೇಕು. ಇದರ ಹಿಂದೆ ಯಾವ ಸಂಘಟನೆಯ ಕೈವಾಡ ಇದೆ ಎನ್ನುವುದು ಬಹಿರಂಗವಾಗಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲ್ಲಿದ್ದೇವೆ. ಉನ್ನತ ಮಟ್ಟದ ತನಿಖೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇವೆ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿದರು.

ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ, ಕುಂದಾಪುರ ಪ್ರಖಂಡ ಕುಂದಾಪುರ ಲವ್ ಜಿಹಾದ್ ವಿರುದ್ಧ ನಡೆದ ಬೃಹತ್ ಪ್ರತಿಭಟನೆ, ಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ 20 ವರ್ಷಗಳಿಂದ ಲವ್ ಜಿಹಾದ್ ಮೂಲಕ ಇಸ್ಲಾಂಗೆ ಮತಾಂತರ ನಡೆಸುವ ಕೃತ್ಯ ನಡೆಯುತ್ತಲೆ ಬಂದಿದೆ. ಅದರ ಬಗ್ಗೆ ಸಮಾಜವನ್ನು ಜಾಗೃತಗೊಳಿಸುವ ಕೆಲಸವನ್ನು ಮಾಡಿಕೊಂಡು ಬಂದರೂ ಕೂಡಾ ಶಿಲ್ಪಾಳ ಸಾವಾಗಿದೆ. ನಮ್ಮ ಹಿಂದೂ ಹೆಣ್ಣು ಮಕ್ಕಳು ಎಚ್ಚೆತ್ತುಕೊಳ್ಳಬೇಕಾಗಿದೆ. ಜಿಹಾದಿಗಳ ಷಡ್ಯಂತ್ರವನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

ಲವ್ ಜಿಹಾದ್‌ನಂತಹ ಕೃತ್ಯಗಳಿಗೆ ಮುಸ್ಲಿಂ ಮುಖಂಡರು ಸಹಕಾರ ಕೊಡುತ್ತಿದ್ದಾರೆ. ಇಂಥಹ ಚಟುವಟಿಕೆಗಳನ್ನು ಮುಂದುವರಿಸಿದರೆ ತಕ್ಕ ಉತ್ತರ ಹಿಂದೂ ಸಮಾಜ ನೀಡಲಿದೆ. ಹಿಜಾಬ್ ವಿಚಾರದಲ್ಲಿ ಆರ್ಥಿಕ ನಿರ್ಭಂಧ ವಿಧಿಸಿದಂತೆ ಕುಂದಾಪುರದಲ್ಲಿಯೂ ಆರ್ಥಿಕ ಬಹಿಷ್ಕಾರ ಮಾಡಲಿದ್ದಾರೆ ಎಂದು ಗುಡುಗಿದರು.

ಹಿಂದೂ ಯುವತಿಯರು ಸಾಮಾಜಿಕ ಜಾಲತಾಣಗಳಿಂದ ಸಾಧ್ಯವಾದಷ್ಟು ದೂರವಿರಿ. ಅಲ್ಲಿ ಹಿಂದೂ ಹೆಸರುಗಳ ಮೂಲಕ ವಂಚಿಸುವ ಜಾಲವೇ ಇದೆ. ಪ್ರೀತಿ ಮಾಡಲು ನಮ್ಮ ವಿರೋಧವಿಲ್ಲ, ಆದರೆ ಇಂಥಹವರ ಆಮಿಷಗಳಿಗೆ ಬಲಿಯಾಗಬೇಡಿ ಎಂದರು.
ಮೃತ ಶಿಲ್ಪ ಕುಟುಂಬಕ್ಕೆ ಸರ್ಕಾರ ೧೦ ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಈ ಸಂದರ್ಭದಲ್ಲಿ ಸರ್ಕಾರಕ್ಕೆ ಆಗ್ರಹಿಸಿದರು.

ಬಜರಂಗದಳ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್ ಮಾತನಾಡಿ, ವಾಮಾಚಾರದ ಮೂಲಕವೂ ಮತಾಂತರ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಈ ಬಗ್ಗೆ ಸಮಾಜವನ್ನು ಜಾಗೃತಿಗೊಳಿಸುವ, ಸ್ವಾಭಿಮಾನಿ ಸಮಾಜ ನಿರ್ಮಾಣದ ಕೆಲಸ ಮಾಡುತ್ತಾ ಬಂದಿದ್ದೇವೆ. ಕರಾವಳಿಯಲ್ಲಿ ದುರ್ಗಾವಾಹಿನಿ ತಂಡಗಳು ಇನ್ನಷ್ಟು ರಚನೆಯಾಗಲಿದೆ. ಟಾಸ್ಕ್‌ಪೊರ್ಸ್ ಮಾದರಿಯಲ್ಲಿ ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಗ್ರ ತನಿಖೆಗೆ ಒತ್ತಾಯಿಸಿ ಡಿವೈ‌ಎಸ್‌ಪಿಗೆ ಮನವಿ ಸಲ್ಲಿಸಲಾಯಿತು.

ವಿಹಿಂಪ ವಿಶ್ವಸ್ಥ ಮಂಡಳಿ ಸದಸ್ಯ ಪ್ರೇಮಾನಂದ ಶೆಟ್ಟಿ ಕಟ್ಕೆರೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಜರಂಗದಳ ವಿಭಾಗ ಸಂಯೋಜಕ ಭುಜಂಗ ಕುಲಾಲ್, ಶ್ರೀಧರ ಬಿಜೂರು, ಮಾತೃಶಕ್ತಿಯ ಪ್ರಮುಖ್ ಪೂರ್ಣಿಮಾ ಸುರೇಶ, ಶಿಲ್ಪಳ ಸಹೋದರ ರಾಘವೇಂದ್ರ ದೇವಾಡಿಗ, ಬಜರಂಗದಳ ತಾಲೂಕು ಸಂಯೋಜಕ ಸುಧೀರ್ ಮೆರ್ಡಿ, ವಿಹಿಂಪ ಜಿಲ್ಲಾ ಸಂಪರ್ಕ ಪ್ರಮುಖ್ ಗಿರೀಶ್ ಕುಂದಾಪುರ ಮೊದಲಾದವರು ಉಪಸ್ಥಿತರಿದ್ದರು.

ಬಜರಂಗದಳ ಜಿಲ್ಲಾ ಕಾರ್ಯದರ್ಶಿ ದಿನೇಶ ಮೆಂಡನ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಸುರೇಂದ್ರ ಮಾರ್ಕೋಡು ಕಾರ್ಯಕ್ರಮ ನಿರ್ವಹಿಸಿ, ವಿಜಯ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!