Sunday, September 8, 2024

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ “ಮೋಸ್ಟ್  ಇನ್ನೋವೇಟೀವ್ ಬ್ಯುಸಿನೆಸ್ ಅವಾರ್ಡ್” ಪ್ರದಾನ

ಮಂಗಳೂರು: ಸಹಕಾರ, ಸಾಮಾಜಿಕ, ಬ್ಯಾಂಕಿಂಗ್ , ಧಾರ್ಮಿಕ ,  ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವ ಸಹಾಯ ಸಂಘಗಳ  ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ,  ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಭಾನುವಾರ    “ಮೋಸ್ಟ್ ಇನ್ನೋವೇಟೀವ್ ಬ್ಯುಸಿನೆಸ್ ಅವಾರ್ಡ್ ” ಪ್ರದಾನ ಮಾಡಲಾಯಿತು.

ಗ್ಲೋಬಲ್ ಲೀಡರ್ಸ್ ಫೌಂಡೇಶನ್ ನವದೆಹಲಿ ಇದರ ಆಶ್ರಯದಲ್ಲಿ ಗೋವಾದ ಪಣಜಿ ಫಿಡಾಲ್ಗೊ ಹೋಟೆಲ್ ಸಭಾಂಗಣದಲ್ಲಿ  ಮೇ -29 ರಂದು ನಡೆದ ಗ್ಲೋಬಲ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಆಯೋಜಿಸಿದ ಜಾಗತಿಕ ಅಭಿವೃದ್ಧಿಯಲ್ಲಿ ಉದಯೋನ್ಮುಖ ಪ್ರವೃತ್ತಿಗಳು ಸೆಮಿನಾರ್ ನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಕೇಂದ್ರ ಸರಕಾರದ ರಾಜ್ಯ ಪ್ರವಾಸೋದ್ಯಮ ಮತ್ತು ಬಂದರು ಸಚಿವರಾದ ಶ್ರೀಪಾದ್ ನಾಯಕ್ ಅವರಿಂದ ‘ ಮೋಸ್ಟ್ ಇನ್ನೋವೇಟೀವ್ ಬ್ಯುಸಿನೆಸ್ ಅವಾರ್ಡ್’ ನ್ನು ಸ್ವೀಕರಿಸಿದರು.

ರಾಜ್ಯದ ಧೀಮಂತ ಸಹಕಾರಿ  ನಾಯಕರಲ್ಲಿ ಒಬ್ಬರಾಗಿರುವ ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ. ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕಳೆದ 28 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆಯನ್ನು ಗೈಯುತ್ತಿರುವ  ಡಾ. ಎಂ.ಎನ್  ರಾಜೇಂದ್ರ ಕುಮಾರ್  ಅವರು ಈ ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿಯಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟ ಶ್ರೇಯಸ್ಸು ಇವರದ್ದು .ಸಹಕಾರ ರಂಗದ ಬ್ಯಾಂಕಿಂಗ್ ಕ್ಷೇತ್ರದಲ್ಲಿ  ಕ್ರಾಂತಿಕಾರಿಕ ಬದಲಾವಣೆಯನ್ನು ತರುವುದರ ಮೂಲಕ ಉತ್ಕೃಷ್ಟ  ಬ್ಯಾಂಕಿಂಗ್ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಅತ್ಯಂತ ಪ್ರಾಮಾಣಿಕ ರೀತಿಯಲ್ಲಿ ಶ್ರಮ ವಹಿಸಿರುವ ರಾಜೇಂದ್ರ ಕುಮಾರ್ ಹಲವಾರು ವಿನೂತನ ಯೋಜನೆಗಳ ಮೂಲಕ ಎಸ್ ಸಿಡಿಸಿಸಿ ಬ್ಯಾಂಕ್ ನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ರಾಜೇಂದ್ರ ಕುಮಾರ್ ಅವರ  ನಾಯಕತ್ವದ ಕಾರ್ಯಕ್ಷಮತೆ ಹಾಗೂ ಬ್ಯಾಂಕಿಂಗ್ ಕ್ಷೇತ್ರದ  ಅದ್ಬುತ ಸಾಧನೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗ್ಲೋಬಲ್ ಲೀಡರ್ಸ್ ಫೌಂಡೇಶನ್ ನೀಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ಲೋಬಲ್ ಲೀಡರ್ಸ್ ಫೌಂಡೇಶನ್ ನವದೆಹಲಿ ಇದರ ಚೇರ್ಮನ್ ರಮೇಶ್ ತ್ರಿಪಾಠಿ, ವೈಸ್ ಚೇರ್ಮನ್ ಡಾ. ತಪನ್ ಕುಮಾರ್ ಶಾಂಡಿಲ್ಯ ,ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾದ ಬೆಳ್ಳಿಪ್ರಕಾಶ್ , ದಕ್ಷಿಣ ಕೊರಿಯಾ ಇನ್ಹಾ ವಿಶ್ವವಿದ್ಯಾಲಯದ ಡೀನ್ ಡಾ. ಎ.ಆರ್. ನಾಸೀರ್ , ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಡಾ.ರಾಜೇಶ್ ಜಿ.ಕೊಣ್ಣೂರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಎನ್.ದೇವರಾಜ್, ಎಸ್ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ , ನಿರ್ದೇಶಕರುಗಳಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು , ಶಶಿಕುಮಾರ್ ರೈ  ಬಾಲ್ಯೋಟ್ಟು , ಎಸ್.ಬಿ. ಜಯರಾಮ ರೈ , ಎಸ್. ರಾಜು ಪೂಜಾರಿ,  ಮಹೇಶ್ ಹೆಗ್ಡೆ ಎಂ,  ಅಶೋಕ್ ಕುಮಾರ್ ಶೆಟ್ಟಿ , ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ.ರೈ ,  ಸದಾಶಿವ ಉಳ್ಳಾಲ್ ,  ರಾಜೇಶ್ ರಾವ್ ,  ಮುಖ್ಯ ಕಾರ್ಯನಿರ್ವಹಣಾಧಿಕಾರಿ  ರವೀಂದ್ರ ಬಿ.  ಬ್ಯಾಂಕಿನ ಮಹಾಪ್ರಬಂಧಕರಾದ ಗೋಪಿನಾಥ್ ಭಟ್, ಉದ್ಯಮಿ ಮೇಘರಾಜ್ ಆರ್. ಜೈನ್ , ಸ್ಕ್ಯಾಡ್ಸ್ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ಕಂಬಳಿ , ಉಭಯ ಜಿಲ್ಲೆಗಳ ಸಹಕಾರ ಯೂನಿಯನ್ ಅಧ್ಯಕ್ಷರುಗಳಾದ ಜಯಕರ ಶೆಟ್ಟಿ ಇಂದ್ರಾಳಿ , ಪ್ರಸಾದ್ ಕೌಶಲ್ ಶೆಟ್ಟಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಹಾಗೂ ಉಭಯ ಜಿಲ್ಲೆಯ ಸಹಕಾರ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು . 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!