spot_img
Wednesday, April 1, 2026
spot_img

ಸ.ಹಿ.ಪ್ರಾ.ಶಾಲೆ ನೂಜಾಡಿ-2 ಬಗ್ವಾಡಿ: ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ: ಸ.ಹಿ.ಪ್ರಾ.ಶಾಲೆ ನೂಜಾಡಿ-2 ಬಗ್ವಾಡಿಯಲ್ಲಿ ದಾನಿಗಳಾದ ಕುಂಭಾಶಿಯ ಎಂ.ಎನ್ ಚಂದನ್ ದಂಪತಿಗಳು ಪ್ರತಿವರ್ಷದಂತೆ ಶಾಲೆಯ ಎಲ್ಲ ಮಕ್ಕಳಿಗೆ ಒಂದು ವರ್ಷಕ್ಕೆ ಬೇಕಾಗುವ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಿದರು.

ಎಸ್‌ಡಿ‌ಎಂಸಿ ಅಧ್ಯಕ್ಷ ಮಂಜುನಾಥ್ ಪುತ್ರನ್, ಉಪಾಧ್ಯಕ್ಷೆ ಭಾವನಾ ಭಟ್ ಹಾಗೂ ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಎಸ್‌ಡಿ‌ಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ದಾನಿಗಳನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಶಾಲೆಯ ಮುಖ್ಯಶಿಕ್ಷಕಿ ಶೈಲಜಾ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಸತ್ಯವತಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಸ್ವಾತಿ ವಂದಿಸಿದರು. ಗೌರವ ಶಿಕ್ಷಕಿಯರಾದ ಜಯಂತಿ, ಹರ್ಷಿತ, ಶ್ವೇತಾ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!